ಗಣಪತಿ ಆತ್ಮಹತ್ಯೆ ಪ್ರಕರಣವನ್ನು ಸಿಬಿಐ ತನಿಖೆಗೆ ವಹಿಸಿ: ಯಡಿಯೂರಪ್ಪ

ಬುಧವಾರ, 13 ಜುಲೈ 2016 (18:02 IST)
ಮಂಗಳೂರು ಡಿವೈಎಸ್‌ಪಿ ಎಂ.ಕೆ.ಗಣಪತಿ ಆತ್ಮಹತ್ಯೆ ಪ್ರಕರಣವನ್ನು ಸಿಬಿಐ ತನಿಖೆಗೆ ವಹಿಸಬೇಕು ಮತ್ತು ಮಾಜಿ ಗೃಹ ಸಚಿವ ಕೆ.ಜೆ.ಜಾರ್ಜ್ ರಾಜೀನಾಮೆ ನೀಡಬೇಕು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಆಗ್ರಹಿಸಿದ್ದಾರೆ.
 
ಶಿವಮೊಗ್ಗದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ, ಮಾಜಿ ಗೃಹ ಸಚಿವ ಜಾರ್ಜ್‌ ಅವರನ್ನು ರಕ್ಷಿಸುವ ಉದ್ದೇಶದಿಂದ ಮಂಗಳೂರು ಡಿವೈಎಸ್‌ಪಿ ಎಂ.ಕೆ.ಗಣಪತಿ ಆತ್ಮಹತ್ಯೆ ಪ್ರಕರಣವನ್ನು ನ್ಯಾಯಾಂಗ ತನಿಖೆಗೆ ನೀಡಿದ್ದಾರೆ. ನಮಗೆ ನ್ಯಾಯಾಂಗ ತನಿಖೆಯ ಮೇಲೆ ನಂಬಿಕೆ ಇಲ್ಲ ಎಂದು ಹೇಳಿದ್ದಾರೆ.
 
ಮುಖ್ಯಮಂತ್ರಿ ಸಿದ್ದರಾಮಯ್ಯ ಸಾರ್ವಜನಿಕರ ದಾರಿತಪ್ಪಿಸುವ ಕೆಲಸ ಮಾಡುತ್ತಿದ್ದಾರೆ. ಆದರೆ, ಸಾರ್ವಜನಿಕರು ಬುದ್ದಿವಂತರಾಗಿದ್ದಾರೆ. ರಾಜ್ಯ ಸರಕಾರಕ್ಕೆ ತಕ್ಕ ಪಾಠ ಕಲಿಸುತ್ತಾರೆ ಎಂದು  ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ರಾಜ್ಯ ಸರಕಾರದ ವಿರುದ್ಧ ಗುಡುಗಿದ್ದಾರೆ.

ತಾಜಾ ಸುದ್ದಿಗಳಿಗಾಗಿ ವೆಬ್ ದುನಿಯಾ ಮೊಬೈಲ್ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ.

ವೆಬ್ದುನಿಯಾವನ್ನು ಓದಿ