ಮಂಗಳೂರು ಡಿವೈಎಸ್‌ಪಿ ಎಂ.ಕೆ.ಗಣಪತಿ ಆತ್ಮಹತ್ಯೆ ಪ್ರಕರಣ ಕುರಿತು ಈಗಾಗಲೇ ನ್ಯಾಯಾಂಗ ತನಿಖೆ ನಡೆಯುತ್ತಿರುವ ಹಿನ್ನೆಲೆಯಲ್ಲಿ ಪ್ರಕರಣವನ್ನು ಸಿಬಿಐ ತನಿಖೆಗೆ ನೀಡುವ ಅಗತ್ಯವಿಲ್ಲ ಎಂದು ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿ ನೇತೃತ್ವದ ಪೀಠ, ಜೆಡಿಎಸ್ ಮುಖಂಡ ಚಂದ್ರಶೇಖರ್ ಸಲ್ಲಿಸಿದ ರೀಟ್ ಅರ್ಜಿಯನ್ನು ವಜಾಗೊಳಿಸಿ ಆದೇಶ ಹೊರಡಿಸಿದೆ.