ಗಾಂಧೀಜಿ ಚಿಂತನೆಗಳೇ ರಾಜ್ಯ ಸರ್ಕಾರಕ್ಕೆ ಆಧಾರ-ಸಿಎಂ ಸಿದ್ದು
ಮಹಾತ್ಮ ಗಾಂಧೀಜಿ ಅವರ ಚಿಂತನೆಗಳನ್ನು ಆಧಾರವಾಗಿಟ್ಟುಕೊಂಡು ರಾಜ್ಯ ಸರ್ಕಾರ ಕಾರ್ಯಕ್ರಮಗಳನ್ನು ರೂಪಿಸಿ, ಅನುಷ್ಠಾನಗೊಳಿಸುತ್ತಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.ಮಹಾತ್ಮ ಗಾಂಧಿ ಅವರು ಹಳ್ಳಿಗಳ ಅಭಿವೃದ್ಧಿಯಿಂದಷ್ಟೇ ದೇಶದ ಅಭಿವೃದ್ಧಿ ಸಾಧ್ಯ ಎಂದು ಬಲವಾಗಿ ನಂಬಿದ್ದರು. ಅದಕ್ಕಾಗಿಯೇ ದೇಶಕ್ಕಾಗಿ ಸರಳ ಆರ್ಥಿಕ ನೀತಿಯನ್ನು ಅವರು ಪ್ರತಿಪಾದಿಸಿ, ಹಳ್ಳಿಗಳ ಬೆಳವಣಿಗೆ ಬಗ್ಗೆ ತಿಳಿಸಿದ್ದರು. ಮಹಾತ್ಮ ಗಾಂಧೀಜಿ ಅವರು ಹಾಕಿಕೊಟ್ಟ ಮಾರ್ಗ ಹಾಗೂ ಅವರ ಚಿಂತನೆಯಂತೆ ಈಗ ರಾಜ್ಯ ಸರ್ಕಾರ ಕೆಲಸ ಮಾಡುತ್ತಿದೆ. ರಾಜ್ಯದ ಎಲ್ಲ ವಲಯ, ಪ್ರದೇಶ ಅಭಿವೃದ್ಧಿ ಆಗುವಂತಹ ಕಾರ್ಯವನ್ನು ಮಾಡುತ್ತಿದೆ.ಇನ್ನು ಸರ್ಕಾರದ ಕಾರ್ಯಕ್ರಮಗಳು ಗಾಂಧೀಜಿ ಅವರ ಚಿಂತನೆಯಂತೆಯೇ ರೂಪಿಸಿ, ಅನುಷ್ಠಾನಗೊಳಿಸಲಾಗುತ್ತಿದೆ. ಆ ಮೂಲಕ ಮಹಾತ್ಮ ಗಾಂಧಿಗೆ ಗೌರವ ಸೂಚಿಸಲಾಗುತ್ತಿದೆ ಎಂದರು.