ಬೆಳಗಾವಿ ಜಿಲ್ಲಾಧಿಕಾರಿ ಕಚೇರಿಯಲ್ಲಿ ಗಣೇಶೋತ್ಸವ: ಮೂರ್ತಿ ಪ್ರತಿಷ್ಠಾಪಿಸಿದ ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್
ಪ್ರತಿ ವರ್ಷದಂತೆ ಈ ಬಾರಿಯೂ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಗಣೇಶ ಮೂರ್ತಿಯನ್ನು ಪ್ರತಿಷ್ಠಾಪನೆ ಮಾಡಲಾಗಿದೆ. ಡಿಸಿ ಮೊಹಮ್ಮದ್ ರೋಷನ್ ಪತ್ನಿ ಅಂಕಿತಾ, ಪುತ್ರ ಹಾಗೂ ಕಚೇರಿಯ ಸಿಬ್ಬಂದಿ ಗಣೇಶ ಮೂರ್ತಿ ಪ್ರತಿಷ್ಠಾಪಿಸಿ ಪೂಜೆ ಸಲ್ಲಿಸಿದ್ದಾರೆ. ಈ ಸಂದರ್ಭದಲ್ಲಿ ಅಪರ ಜಿಲ್ಲಾಧಿಕಾರಿ ವಿಜಯಕುಮಾರ್ ಹೊನಕೇರಿ, ಕಛೇರಿಯ ಸಿಬ್ಬಂದಿ ಉಪಸ್ಥಿತರಿದ್ದರು.