ಗಂಗಾಮತ,ಕೇಂದ್ರಕ್ಕೆ ಶೀಘ್ರವೇ ಸ್ಪಷ್ಟೀಕರಣ-ಸಿಎಂ ಸಿದ್ದರಾಮಯ್ಯ

geetha

ಬುಧವಾರ, 17 ಜನವರಿ 2024 (18:07 IST)
ಬೆಂಗಳೂರು-ಗಂಗಾಮತ, ಅಂಬಿಗ, ಕೋಲಿ, ಕಬ್ಬಲಿಗ ಸೇರಿದಂತೆ ೩೯ ಉಪ ಜಾತಿಗಳು ಪರಿಶಿಷ್ಟ ವರ್ಗಕ್ಕೆ ಸೇರಲು ಸಂಪೂರ್ಣ ಅರ್ಹತೆ ಹೊಂದಿದ್ದು, ಈ ಸಮಾಜವನ್ನು ಪರಿಶಿಷ್ಟ ವರ್ಗಕ್ಕೆ ಸೇರಿಸಲು ಕೇಂದ್ರಕ್ಕೆ ಪ್ರಸ್ತಾವನೆ ಕಳುಹಿಸಿದ್ದೇನೆ. ಕೇಂದ್ರ ಸರ್ಕಾರ ಈ ಸಮುದಾಯಗಳನ್ನು ಪರಿಶಿಷ್ಟ ವರ್ಗಕ್ಕೆ ಸೇರಿಸಲು ಕೆಲ ಸ್ಪಷ್ಟೀಕರಣ ಕೋರಿ ರಾಜ್ಯಕ್ಕೆ ಹಿಂದಿರುಗಿಸಿದ್ದು, ಶೀಘ್ರವೇ ಕೇಂದ್ರಕ್ಕೆ ಸ್ಪಷ್ಟೀಕರಣ ಕಳುಹಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.

ಏಳನೇ ವೇತನ ಆಯೋಗ ರಚನೆಯಾಗಿ 12 ತಿಂಗಳಾಗಿದೆ. ಚುನಾವಣಾ ನೀತಿ ಸಂಹಿತೆ ಘೋಷಣೆಯಾಗುವ ಮೊದಲೇ ವೇತನ ಪರಿಷ್ಕರಣೆ ಮಾಡಿ ಘೋಷಣೆ ಮಾಡುವಂತೆ ಮನವಿ ಸಲ್ಲಿಸಲಾಗಿತ್ತು.ಇದಕ್ಕೆ ಉತ್ತರಿಸಿದ ಸಿಎಂ ಸಿದ್ರಾಮಯ್ಯ ಅಂತಿಮ ವರದಿ ಬಂದ ನಂತರ ಸರ್ಕಾರಿ ನೌಕರರ ವೇತನ ಪರಿಷ್ಕರಣೆ ಬಗ್ಗೆ ತೀರ್ಮಾನ ಮಾಡಲಾಗುವುದು ಎಂದು ಭರವಸೆ ನೀಡಿದ್ದಾರೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ