ಗಂಗಾವತಿ ಕನ್ನಡ ಸಾಹಿತ್ಯ ಸಮ್ಮೇಳನ: ಹಾಸ್ಯ ಸಾಹಿತಿ ಗಂಗಾವತಿ ಪ್ರಾಣೇಶ ಮೆರಗು

ಮಂಗಳವಾರ, 31 ಜುಲೈ 2018 (16:49 IST)
ಹಾಸ್ಯ ಸಾಹಿತಿ ಗಂಗಾವತಿ ಪ್ರಾಣೇಶ ಅಧ್ಯಕ್ಷತೆಯಲ್ಲಿ ಗಂಗಾವತಿ ತಾಲೂಕಿನ 6 ನೇ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಅದ್ದೂರಿ ಚಾಲನೆ ನೀಡಲಾಯಿತು. ನಗರದ ಪ್ರಮುಖ ಬೀದಿಗಳಲ್ಲಿ ಸಮ್ಮೇಳನ ಅಧ್ಯಕ್ಷ ಬಿ.ಪ್ರಾಣೇಶ ದಂಪತಿಗಳೊಂದಿಗೆ
ಭುವನೇಶ್ವರಿ ದೇವಿಯ ಭಾವಚಿತ್ರದ ಮೆರವಣಿಗೆ ಅದ್ದೂರಿಯಾಗಿ ನಡೆಯಿತು.

ಕನ್ನಡ ಭಾಷೆಯ ಅಸ್ತಿತ್ವಕ್ಕೆ ಧಕ್ಕೆಯಾಗುವ ಭಯವಿದೆ ಎಂದು ಹಿರಿಯ ಪತ್ರಕರ್ತ ವಿಶ್ವೇಶ್ವರ ಭಟ್ಟ ಅಭಿಪ್ರಾಯ ಪಟ್ಟಿದ್ದಾರೆ. 

ಕೊಪ್ಪಳ ಜಿಲ್ಲೆಯ ಗಂಗಾವತಿ  ನಗರದಲ್ಲಿ ನಡೆದ ತಾಲೂಕಾ 6ನೇ ಕನ್ನಡ ಸಾಹಿತ್ಯ ಸಮ್ಮೇಳನ ಉದ್ಘಾಟಿಸಿ ಮಾತನಾಡಿದ ಅವರು, ನಮ್ಮ ಜನ ಅವರ ಮಕ್ಕಳನ್ನು ಸರ್ಕಾರಿ ಶಾಲೆಗೆ ಕಳಿಸಿದ್ದರೆ. 28858 ಶಾಲೆಗಳು ಮುಚ್ಚುವ ಪ್ರಯತ್ನ ಸರ್ಕಾರ ಮಾಡಿತ್ತಿರಲಿಲ್ಲ.  ಕನ್ನಡಕ್ಕೆ ಆಪತ್ತು ಬರುತ್ತಿದೆಯಾ ಎಂಬ ಆತಂಕ ನನಗೆ ಬಂದಿದೆ. ಕನ್ನಡದಲ್ಲಿ ಓದಿದರೆ ಕೆಲಸ ಸಿಗುತ್ತಿಲ್ಲ ಎಂಬ ಭಾವನೆ ನಮ್ಮ ಜನರಿಗೆ ಬರುತ್ತಿದೆ.  ಇದರಿಂದ ಕನ್ನಡ ಶಾಲೆಗಳು ಮುಚ್ಚುವ ಸ್ಥಿತಿಗೆ ಬಂದಿವೆ. ಇಂಗ್ಲಿಷ್ ಒಂದು ಭಾಷೆ ಅದು ಜ್ಞಾನ ಅಲ್ಲ ಎಂದು ವಿಶ್ವೇಶ್ವರ ಭಟ್ಟ ಹೇಳಿದ್ದಾರೆ. 

 

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ