ಮುಳುಗಡೆ ಭೀತಿ ಎದುರಿಸುತ್ತಿರುವ ಗಂಗಾವತಿ – ಕಂಪ್ಲಿ ಸೇತುವೆ

ಭಾನುವಾರ, 19 ಆಗಸ್ಟ್ 2018 (14:49 IST)
ಗಂಗಾವತಿ - ಕಂಪ್ಲಿಯಲ್ಲಿ ನೆರೆಹಾವಳಿ ಪ್ರದೇಶವನ್ನು ಜಿಲ್ಲಾಧಿಕಾರಿ ಡಾ.ರಾಮ್ ಪ್ರಸಾತ್ ಮನೋಹರ್ ಭೇಟಿ, ಪರಿಶೀಲನೆ ನಡೆಸಿದ್ದಾರೆ.

ಬಳ್ಳಾರಿ ಜಿಲ್ಲೆ ಕಂಪ್ಲಿ ತಾಲೂಕಿನ ಕಂಪ್ಲಿ -ಗಂಗಾವತಿ ತುಂಗಭದ್ರ ನದಿಯ ಸೇತುವೆಯನ್ನು ಬಳ್ಳಾರಿ ಜಿಲ್ಲಾಧಿಕಾರಿ ರಾಮ್ ಪ್ರಸಾತ್ ಮನೋಹರ ನೇತೃತ್ವದ ತಂಡ ಭೇಟಿ ನೀಡಿ ಪರಿಶೀಲಿಸಿದ್ದಾರೆ.

ಪ್ರವಾಹಕ್ಕೆ ತುಂಗಾಭದ್ರಾ ನದಿ ಸೇತುವೆ ಬಲವರ್ಧನೆಗೆ ಸೂಕ್ತ ಕ್ರಮ ಕೈಗೊಳ್ಳಲಾಗುತ್ತದೆ. ತಾಂತ್ರಿಕವಾಗಿ ತುಂಗಭದ್ರಾ ನದಿ ಸೇತುವೆ ಕೊಪ್ಪಳ ಜಿಲ್ಲೆಗೆ ಸೇರಿದ್ದು, ನೂತನ ಸೇತುವೆ ನಿರ್ಮಾಣಕ್ಕೆ ಸಂಬಂಧಿಸಿದಂತೆ ಅಧಿಕಾರಿಗಳು, ಸಚಿವರೊಂದಿಗೆ ಸಮಾಲೋಚಿಸಿ ಶೀಘ್ರ ಸೇತುವೆ ನಿರ್ಮಾಣಕ್ಕೆ ಮುಂದಾಗುತ್ತೇವೆ ಎಂದ್ರು.
ನದಿಗೆ  2ಲಕ್ಷ ಕ್ಯೂಸೆಕ್ ಗೂ ಅಧಿಕ ನೀರು ಹರಿದು ಬಂದಿದ್ದರಿಂದ ನದಿಪಾತ್ರದ ಮನೆ, ಜಮೀನುಗಳಲ್ಲಿ ನೀರು ನುಗ್ಗಿದೆ. ಜಿಲ್ಲೆಯ ಸಿರುಗುಪ್ಪ, ಕಂಪ್ಲಿ  ಸೇರಿ ನದಿ ಪಾತ್ರದ 2220 ಹೆಕ್ಟೇರ್ ನಷ್ಟು ಜಮೀನಿನ ಬೆಳೆ ನಷ್ಟವಾಗಿದೆ. ಸಮೀಕ್ಷೆ ನಡೆಸಿ ನಷ್ಟ ಪರಿಹಾರಕ್ಕೆ ಸೂಕ್ತ ಕ್ರಮ ಕೈಗೊಳ್ಳುತ್ತೇವೆ ಅಂತ ಡಿಸಿ ಡಾ.ರಾಮ್ ಪ್ರಸಾತ್ ಮನೋಹರ್ ಹೇಳಿದ್ದಾರೆ. ಇನ್ನೂ ಹೆಚ್ಚಿನ ಪ್ರಮಾಣದ ನೀರು ಬರುವ ಸಾಧ್ಯತೆಗಳಿದ್ದು ನದಿ ಪಾತ್ರದ ಜನತೆ, ಜಾಗೃತರಾಗಿರಬೇಕು ಎಂದರು.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ