ತಾಲೂಕಿನ ಚಿಗರೇನಹಳ್ಳಿಯಲ್ಲಿನ ಬಿಎಂಪಿ ಕಸ ವಿಲೇವಾರಿಯ ಎಂಎಸ್‌ಜಿಪಿ ಘಟಕ ಮುಚ್ಚುವಂತೆ, ತಾಲೂಕಿನ ಮೂಗೇನಹಳ್ಳಿ ಬಾರೆ ಬಳಿ ಶಾಸಕ ಟಿ.ವೆಂಕಟರಮಣಯ್ಯ ನೇತೃತ್ವದಲ್ಲಿ ಗ್ರಾಮಸ್ಥರು ನಡೆಸುತ್ತಿದ್ದ ಪ್ರತಿಭಟನಾ ಸ್ಥಳಕ್ಕೆ ಭೇಟಿ ನೀಡಿ ಮಾತನಾಡಿದರು.ಈ ಮುನ್ನ ಎಂಎಸ್‌ಜಿಪಿ ಕಸ ವಿಲೇವಾರಿ ಘಟಕಕ್ಕೆ ಶಾಸಕರು, ಜಿಲ್ಲಾಧಿಕಾರಿ, ಬಿಬಿಎಂಪಿ ಅಧಿಕಾರಿಗ ಳೊಂದಿಗೆ ಭೇಟಿ ನೀಡಿ, ಕಸ ವಿಲೇವಾರಿ ಬಗ್ಗೆ ಮಾಹಿತಿ ಪಡೆದರು.ಸಚಿವರು ಸ್ಥಳಕ್ಕೆ ಆಗಮಿಸಿದ ವೇಳೆ, ಭಕ್ತರಹಳ್ಳಿ ಗ್ರಾಪಂ ಸದಸ್ಯ ಲತಾಶ್ರೀ ಮಾತನಾಡಿ, ಎಂಎಸ್‌ಜಿಪಿ ಘಟಕದಿಂದಾಗಿ ಇಲ್ಲಿ ಜನ ವಾಸಿ ಸಲು ಆಗುತ್ತಿಲ್ಲ. ಇತ್ತೀಚೆಗೆ ಸುರಿದ ಮಳೆಯಿಂದಾಗಿ ಘಟಕದ ಕಸದ ನೀರು, ಮಳೆ ನೀರಿಗೆ ಸೇರಿ, ಕೆರೆ ಕುಂಟೆ ಕಾಲುವೆಗಳಲ್ಲಿ ವಿಷಕಾರಿ ನೀರು ಹರಿಯುತ್ತಿದೆ. ಕಾಲುವೆಗಳಲ್ಲಿ ವಿಷಯುಕ್ತ ನೀರು ಹರಿಯುತ್ತಿವೆ.
ಮಹಿಳೆಯರಿಗೆ ಗರ್ಭಪಾತದ ಸಮಸ್ಯೆ, ಮಕ್ಕಳಿಗೆ ಹಾಗೂ ವೃದ್ಧರಿಗೆ ವಿವಿಧ ರೋಗ ರುಜಿನ ಹೆಚ್ಚಾಗುತ್ತಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದರು. ಶಾಸಕ ಟಿ.ವೆಂಕಟರಮಣಯ್ಯ ಮಾತನಾಡಿ, ಎಂಎಸ್‌ಜಿಪಿ ಕಸ ವಿಲೇವಾರಿ ಘಟಕದ ದುಷ್ಪರಿಣಾಮ ಕುರಿತು ಸಂಬಂಧ ಪಟ್ಟವರ ಗಮನಕ್ಕೆ ತರಲಾಗಿದೆ. 2019ರಲ್ಲಿ ಟೆರ್ರಾಫರ್ಮಾ ಘಟಕದ ವಿರುದ್ಧ ಹೋ ರಾಟ ಮಾಡಿದಾಗ, ಅಂದು ಜಿಲ್ಲಾ ಉಸ್ತುವಾರಿ ಸಚಿವ ರಾಗಿದ್ದ ಆರ್.ಅಶೋಕ್ ಭರವಸೆ ನೀಡಿ ಘಟಕ ಸ್ಥಗಿತ ಗೊಳಿಸಲಾಗಿತ್ತು.