ಬೆಂಗಳೂರು ಹೊರವಲಯ ಆನೇಕಲ್ ತಾಲೂಕಿನ ಮನೆಯೊಂದರಲ್ಲಿ ಗ್ಯಾಸ್ ಸಿಲಿಂಡರ್ ಸ್ಫೋಟ

ಬುಧವಾರ, 6 ಅಕ್ಟೋಬರ್ 2021 (18:35 IST)
ಆನೇಕಲ್: ಗ್ಯಾಸ್ ಸಿಲಿಂಡರ್ ಸ್ಫೋಟಗೊಂಡು 9 ಜನರಿಗೆ ಗಂಭೀರವಾಗಿ ಗಾಯಗೊಂಡ ಘಟನೆ ಬೆಂಗಳೂರು ನಗರದ ಹೊರವಲಯ ಆನೇಕಲ್ ತಾಲೂಕಿನ  ಹೊಸೂರು ಪಟ್ಟಣದಲ್ಲಿ ನಡೆದಿದೆ.
 
ಇಲ್ಲಿನ ರಾಮನಗರದ ಮನೆಯೊಂದರಲ್ಲಿ ಘಟನೆ ನಡೆದಿದ್ದು, ಒಂದೇ ಕುಟುಂಬದ 7 ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ. ಅಲ್ಲದೇ ಅಕ್ಕಪಕ್ಕದ ಮನೆಯವರಿಗೂ ಗಂಭೀರವಾಗಿ ಗಾಯಗೊಂಡು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದು ಬಂದಿದೆ. 
 
ಇಂದು ಬೆಳಿಗ್ಗೆ ಆಡುಗೆ ಮಾಡಲು ಗ್ಯಾಸ್ ಸ್ಟವ್ ಆನ್ ಮಾಡಿದಾಗ ಸ್ಫೋಟಗೊಂಡಿದೆ. ಸಿಲಿಂಡರ್‌ನ ಬ್ಲಾಸ್ ತೀವ್ರತೆಗೆ ಮನೆಯ ಮೇಲ್ಬಾವಣಿ ಸಂಪೂರ್ಣ ಹಾನಿಯಾಗಿದೆ. ಈ ಕುರಿತು ಹೊಸೂರು ಟೌನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಪೊಲೀಸರು ಹೆಚ್ಚಿನ ತನಿಖೆ ಕೈಗೊಂಡಿದ್ದಾರೆ.
gaus

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ