ಗೇಟ್ ಅಳವಡಿಕೆ ಯಶಸ್ವಿ, ತುಂಗಭದ್ರಾ ಅಣೆಕಟ್ಟಿನಲ್ಲಿ ಮತ್ತೇ ಏರುತ್ತಿದೆ ನೀರಿನ ಮಟ್ಟ
ಇಂದು ಸನ್ಮಾನ: ತಾತ್ಕಾಲಿಕ ಗೇಟ್ ಅಳವಡಿಸಿ ಯಶಸ್ವಿಯಾಗಿ ಕಾರ್ಯಾಚರಣೆ ನಡೆಸಿದ ತಂತ್ರಜ್ಞರು, ಸಿಬ್ಬಂದಿಯನ್ನು ಇಂದು ಮಧ್ಯಾಹ್ನ ಅಣೆಕಟ್ಟೆಯ ಆವರಣದಲ್ಲಿ ಸನ್ಮಾನಿಸಲು ಸಿದ್ಧತೆ ನಡೆದಿದೆ.
ಜಿಲ್ಲಾ ಉಸ್ತುವಾರಿ ಸಚಿವ ಜಮೀರ್ ಅಹ್ಮದ್ ಖಾನ್ ಅವರು 35 ಸಿಬ್ಬಂದಿಗೆ ತಲಾ ₹50 ಸಾವಿರ ಬಹುಮಾನ ಪ್ರಕಟಿಸಿದ್ದು, ಬಹುತೇಕ ಇಂದೇ ಅದನ್ನು ಶಾಸಕ ಕಂಪ್ಲಿ ಗಣೇಶ್ ಅವರ ಮೂಲಕ ಹಸ್ತಾಂತರಿಸುವ ಸಾಧ್ಯತೆ ಇದೆ ಎಂದು ಮೂಲಗಳಿಂದ ತಿಳಿದುಬಂದಿದೆ.