ಗೌರಿ ಲಂಕೇಶ್ ಹತ್ಯೆ: ಬೆಂಗಳೂರಿಗೆ ಬಂದ ಕಾಂಗ್ರೆಸ್ ಉಸ್ತುವಾರಿ ವೇಣುಗೋಪಾಲ್

ಬುಧವಾರ, 6 ಸೆಪ್ಟಂಬರ್ 2017 (10:44 IST)
ಬೆಂಗಳೂರು: ಪತ್ರಕರ್ತೆ, ವಿಚಾರವಾದಿ ಗೌರಿ ಲಂಕೇಶ್ ಹತ್ಯೆ ಪ್ರಕರಣವನ್ನು ಗಂಭೀರವಾಗಿ  ಪರಿಗಣಿಸಿರುವ ಕಾಂಗ್ರೆಸ್ ಹೈಕಮಾಂಡ್, ರಾಜ್ಯ ಉಸ್ತುವಾರಿ ವೇಣುಗೋಪಾಲ್ ರನ್ನು ಬೆಂಗಳೂರಿಗೆ ಕಳುಹಿಸಿದೆ.


ಬೆಂಗಳೂರಿಗೆ ಆಗಮಿಸುತ್ತಿರುವ ವೇಣುಗೋಪಾಲ್, ಗೌರಿ ಕುಟುಂಬದವರಿಗೆ ಸಾಂತ್ವನ ಹೇಳಲಿದ್ದಾರೆ ಮತ್ತು ನಂತರ ಅಂತಿಮ ಸಂಸ್ಕಾರದಲ್ಲೂ ಭಾಗವಹಿಸಲಿದ್ದಾರೆ ಎನ್ನಲಾಗಿದೆ. ಈ ಮೂಲಕ ಕಾಂಗ್ರೆಸ್ ಹೈಕಮಾಂಡ್ ಕೂಡಾ ಗೌರಿ ಲಂಕೇಶ್ ಹತ್ಯೆಯನ್ನು ಗಂಭೀರವಾಗಿ ಪರಿಗಣಿಸಿದೆ ಎನ್ನಬಹುದು.

ಘಟನೆ ಬಗ್ಗೆ ಸಿಎಂ ಸಿದ್ದರಾಮಯ್ಯ ಜತೆ ಚರ್ಚಿಸಲಿದ್ದಾರೆ ಎನ್ನಲಾಗಿದೆ. ಅತ್ತ ಸಿಎಂ ಸಿದ್ದರಾಮಯ್ಯ ಕೂಡಾ ಮುಂಜಾನೆಯಿಂದಲೇ ಪೊಲೀಸರ ಜತೆ ಕ್ಷಣ ಕ್ಷಣದ ವರದಿ ಪಡೆಯುತ್ತಿದ್ದು, ತಕ್ಷಣವೇ ಆರೋಪಿಗಳನ್ನು ಪತ್ತೆ ಹಚ್ಚುವಂತೆ ಸೂಚನೆ ನೀಡಿದ್ದಾರೆ ಎನ್ನಲಾಗಿದೆ.

ಇದನ್ನೂ ಓದಿ.. ಮಾಂಸದ  ಜಾಹೀರಾತಿನಲ್ಲಿ ಗಣಪತಿ ವಿಗ್ರಹ!
 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ