ಗೌರಿ ಲಂಕೇಶ್ ಹತ್ಯೆ ಪ್ರಕರಣ: ಐವರು ವಶಕ್ಕೆ

ಶುಕ್ರವಾರ, 24 ಆಗಸ್ಟ್ 2018 (20:55 IST)
ವಿಚಾರವಾದಿ, ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣಕ್ಕೆಸಂಬಂಧಿಸಿದಂತೆ ವಿಶೇಷ ತನಿಖಾ ತಂಡದ ಅಧಿಕಾರಿಗಳು ಕಾರ್ಯಾಚರಣೆ ಚುರುಕುಗೊಳಿಸಿದ್ದಾರೆ. ಏತನ್ಮಧ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಹಿಂದೂ ಸಂಘಟನೆಯ ಐವರನ್ನು ವಶಕ್ಕೆ ತೆಗೆದುಕೊಂಡು ವಿಚಾರಣೆ ನಡೆಸಲು ಮುಂದಾಗಿದ್ದಾರೆ.

ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹಾರಾಷ್ಟ್ರದ ಹಿಂದೂ ಸಂಘಟನೆಯ ಮುಖಂಡರಾದ ವೈಭವ ರಾವತ್, ಸುದನ್ವ, ಗೊಂಧಾಳೇಕರ್, ಶರದ ಕಳಸ್ಕರ್ ಸೇರಿ ಐವರನ್ನು ತನಿಖಾಧಿಕಾರಿಗಳು ವಶಕ್ಕೆ ತೆಗೆದುಕೊಂಡು ವಿಚಾರಣೆ ಆರಂಭಿಸಿದ್ದಾರೆ.

ಮಹಾರಾಷ್ಟ್ರದ ಎಸ್ ಐ ಟಿ ತಂಡ ಇವರನ್ನು ಬಂಧಿಸಿದಾಗ ಬಂಧಿತರಿಂದ ಪಿಸ್ತೂಲ್ ಗಳು ಹಾಗೂ ಮದ್ದು ಗುಂಡುಗಳು ಸಿಕ್ಕಿದ್ದವು. ಇದರಲ್ಲಿ ಒಂದು ಪಿಸ್ತೂಲ್ ನ್ನು ಗೌರಿ ಲಂಕೇಶ್ ಹತ್ಯೆಗಾಗಿ ಖರೀದಿಸಿರುವ ಶಂಕೆ ತನಿಖಾಧಿಕಾರಿಗಳಿಗೆ ವ್ಯಕ್ತವಾಗಿದೆ. ಗೌರಿ ಲಂಕೇಶ್ ಹತ್ಯೆಗೆ ಪಿಸ್ತೂಲ್ ನೀಡಿದವರು ಇವರೇ ಎನ್ನುವ ಅನುಮಾನ ಕಾಡಲಾರಂಭಿಸಿದೆ. ತನಿಖಾಧಿಕಾರಿಗಳು ಆ ನಿಟ್ಟಿನಲ್ಲಿಯೂ ಕಾರ್ಯಾಚರಣೆ ಮುಂದುವರಿಸಿದ್ದಾರೆ.


ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ