ಗೌರಿ ಲಂಕೇಶ್ ಹಂತಕರು ಯಾರು ಎಂದು ತಿಳಿದಿದೆ: ರಾಮಲಿಂಗಾರೆಡ್ಡಿ
ಚಿಕ್ಕಬಳ್ಳಾಪುರ: ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣ ತನಿಖೆ ಬಹುತೇಕ ಮುಗಿದಿದ್ದು, ಸದ್ಯದಲ್ಲೇ ಹಂತಕರನ್ನು ಬಂಧಿಸುತ್ತೇವೆ ಎಂದು ಗೃಹಸಚಿವ ರಾಮಲಿಂಗಾರೆಡ್ಡಿ ಹೇಳಿದ್ದಾರೆ.
ರಾಜ್ಯದ 30 ಜಿಲ್ಲೆಗಳಲ್ಲೂ ಕಾನೂನು ಸುವ್ಯವಸ್ಥೆ ಚೆನ್ನಾಗಿದೆ. ಕಾನೂನು ಸುವ್ಯವಸ್ಥೆ ಕಾಪಾಡಲು ಸರ್ಕಾರ ಹಾಗೂ ಪೊಲೀಸ್ ಇಲಾಖೆ ಎಲ್ಲಾ ಅಗತ್ಯ ಕ್ರಮಗಳನ್ನ ಕೈಗೊಂಡಿದೆ ಎಂದರು.