ಪ್ರತಿಷ್ಠಿತ ಕಾಲೇಜಿನಲ್ಲಿ ಬಿಇ ವ್ಯಾಸಂಗ ಮಾಡುತ್ತಿದ್ದ ವಿದ್ಯಾರ್ಥಿನಿಯೊಬ್ಬಳು ಗಣೇಶ ಹಬ್ಬದ ಹಿನ್ನೆಲೆಯಲ್ಲಿ ಬಳ್ಳಾರಿಗೆ ಹೋಗಿದ್ದಳು. ಸೆಪ್ಟೆಂಬರ್ 12ರ ರಾತ್ರಿ ಬಳ್ಳಾರಿಯಿಂದ ಕೆ.ಎಸ್.ಆರ್.ಟಿ.ಸಿ ಬಸ್‍ನಲ್ಲಿ ಬೆಂಗಳೂರಿಗೆ ಪ್ರಯಾಣ ಬೆಳೆಸಿದ್ದಳು . ಅಪರಿಚಿತ ಯುವಕ ಪಕ್ಕದಲ್ಲೇ ಕುಳಿತು ಪ್ರಯಾಣ ಬೆಳೆಸಿದ್ದ. ಬಸ್ ಹೊರಟ ಕೆಲ ಸಮಯದ ನಂತರ ಯುವತಿ ನಿದ್ದೆಗೆ ಜಾರಿದ್ದಳು.
ನೊಂದ ಯುವತಿ ಪೊಲೀಸರಿಗೆ ದೂರು ನೀಡಿದ್ದಳು. ಪ್ರಕರಣ ದಾಖಲಿಸಿಕೊಂಡ ಬಾಗಲಗುಂಟೆ ಪೊಲೀಸರು ತನಿಖೆ ಕೈಗೊಂಡು ಆರೋಪಿ ಬಂಧನಕ್ಕೆ ಬಲೆ ಬೀಸಿದ್ದರು. ಬಳ್ಳಾರಿ ಬಸ್ ನಿಲ್ದಾಣದಲ್ಲಿ ಬಸ್‍ಗೆ ಯಾರೆಲ್ಲ ಹತ್ತಿದ್ದರು ಎಂಬುದರ ಬಗ್ಗೆ ಸಿಸಿ ಕ್ಯಾಮರಾ ಮತ್ತು ಬಸ್ ಟಿಕೆಟ್ ಪರಿಶೀಲನೆ ನಡೆಸಿದಾಗ ಆರೋಪಿಯ ಮುಖಚಹರೆ ಪತ್ತೆಯಾಗಿತ್ತು. ಯುವತಿ ಸಹ ಗುರುತು ಹಿಡಿದಿದ್ದಳು ಈ ಆಧಾರದ ಮೇಲೆ ಬೆನ್ನತ್ತಿದ್ದಾಗ ವಿಜಯನಗರದಲ್ಲಿ ಆರೋಪಿಯನ್ನು ಬಂಧಿಸಿ ನ್ಯಾಯಾಲಯಕ್ಕೆ ಒಪ್ಪಿಸಲಾಗಿದೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.