ಹಿರೇನಾಗವೇಲಿ ಬಳಿ ಜಿಲೆಟಿನ್ ಪ್ರಕರಣ; ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳುವುದಾಗಿ ಸಿಎಂ ಭರವಸೆ

ಮಂಗಳವಾರ, 23 ಫೆಬ್ರವರಿ 2021 (11:05 IST)
ಬೆಂಗಳೂರು  : ಚಿಕ್ಕಬಳ್ಳಾಪುರದ ಹಿರೇನಾಗವೇಲಿ ಬಳಿ ಜಿಲೆಟಿನ್ ಸ್ಫೋಟವಾದ ಹಿನ್ನಲೆಯಲ್ಲಿ 6 ಮಂದಿ ಬಲಿಯಾಗಿದ್ದಾರೆ. ಈ ಘಟನೆಗೆ ಸಂಬಂಧಿಸಿದಂತೆ  ಸಿಎಂ ಯಡಿಯೂರಪ್ಪ ಸಂತಾಪ ಸೂಚಿಸಿದ್ದಾರೆ.

ಈ ಬಗ್ಗೆ ಟ್ವೀಟ್ ಮಾಡಿರುವ ಸಿಎಂ ಯಡಿಯೂರಪ್ಪ, ಘಟನಾ ಸ್ಥಳಕ್ಕೆ ಆರೋಗ್ಯ ಸಚಿವ ಸುಧಾಕರ್ ಹಾಗೂ ಗೃಹ ಸಚಿವ ಬೊಮ್ಮಾಯಿ ಭೇಟಿ ನೀಡಿದ್ದಾರೆ. ಈ ಬಗ್ಗೆ ಮಾಹಿತಿ ಪಡೆಯಾಲಾಗುತ್ತಿದೆ. ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು. ರಾಜ್ಯದಲ್ಲಿ ಅಕ್ರಮ ಗಣಿಗಾರಿಕೆ ತಡೆಗೆ ಕ್ರಮ ತೆಗೆದುಕೊಳ್ಳಲಾಗಿದೆ. ಅನುಮತಿ ಇರುವವರಿಗೆ ಅಷ್ಟೇ ಸ್ಪೋಟಕ್ಕೆ ಅವಕಾಶ ನೀಡಲಾಗಿದೆ ಎಂದು ಹೇಳಿದ್ದಾರೆ.

ಹಾಗೇ ಘಟನೆಯಲ್ಲಿ ಮೃತಪಟ್ಟವರ ಆತ್ಮಕ್ಕೆ ಶಾಂತಿ ಸಿಗಲಿ. ಕುಟುಂಬದವರಿಗೆ ದುಃಖ ಭರಿಸುವ ಶಕ್ತಿ ನೀಡಲಿ ಎಂದು ಅವರು ತಿಳಿಸಿದ್ದಾರೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ