ಬಜೆಟ್‌ನಲ್ಲಿ ಗ್ರಾಮೀಣಾಭಿವೃದ್ಧಿಗೆ ಹೆಚ್ಚು ಒತ್ತು ನೀಡಿದ ಸರಕಾರ:ಯಡಿಯೂರಪ್ಪ

ಸೋಮವಾರ, 29 ಫೆಬ್ರವರಿ 2016 (13:59 IST)
ಕೇಂದ್ರ ವಿತ್ತ ಸಚಿವ ಅರುಣ್ ಜೇಟ್ಲಿ ಇಂದು ಮಂಡಿಸಿದ ಬಜೆಟ್ ಸ್ವಾತಂತ್ರ್ಯ ಬಂದ ನಂತರ ಮೊದಲ ಬಾರಿಗೆ ಐತಿಹಾಸಿಕ ಬಜೆಟ್ ಇದಾಗಿದೆ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್,ಯಡಿಯೂರಪ್ಪ ಹೇಳಿದ್ದಾರೆ
 
ಸಚಿವ ಜೇಟ್ಲಿ, ನೀರಾವರಿ, ಗ್ರಾಮೀಣಾಭಿವೃದ್ಧಿ, ಸಣ್ಣ ತೆರಿಗೆದಾರರು ಮತ್ತು ಕೃಷಿಕರಿಗೆ ಹೆಚ್ಚಿನ ಒತ್ತು ನೀಡಿದ್ದಾರೆ ಎಂದು ಸಂತಸ ವ್ಯಕ್ತಪಡಿಸಿದರು.
 
ಬೆಳೆಪರಿಹಾರ ನಿಧಿ, ಗ್ರಾಮೀಣ ಜ್ಯೋತಿ ಯೋಜನೆ ಸೇರಿದಂತೆ ಹಲವು ಮಹತ್ವದ ಯೋಜನೆಗಳಿಗೆ ಹಣವನ್ನು ಮೀಸಲಾಗಿಟ್ಟು ಗ್ರಾಮದ ವಿಕಾಸಕ್ಕೆ ಹೆಚ್ಚಿನ ಆದ್ಯತೆ ನೀಡಿದ್ದಾರೆ ಎಂದು ತಿಳಿಸಿದ್ದಾರೆ.
 
ಬೆಳೆ ದರ ನಿಗದಿ ಮತ್ತು ಗ್ರಾಮ ಪಂಚಾಯಿತಿಗಳಿಗೆ ಹೆಚ್ಚಿನ ಆರ್ಥಿಕ ಅನುದಾನ, ನೀರಾವರಿ ಯೋಜನೆಗಳಿಗೆ 17 ಸಾವಿರ ಕೋಟಿ ರೂಪಾಯಿ ಮೀಸಲಾಗಿರಿಸಿರುವುದು ದೇಶದ ಕೃಷಿಕರಿಗೆ ಸಂತಸ ತರಲಿದೆ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹೇಳಿದ್ದಾರೆ.

ವೆಬ್ದುನಿಯಾವನ್ನು ಓದಿ