ಗಣಪತಿ ಆತ್ಮಹತ್ಯೆಯಲ್ಲಿ ಸಚಿವ ಜಾರ್ಜ್ ಕೈವಾಡ ಕಂಡುಬರುತ್ತಿಲ್ಲ: ಸಚಿವ ಜಯಚಂದ್ರ

ಶನಿವಾರ, 16 ಜುಲೈ 2016 (16:31 IST)
ಮಂಗಳೂರು ಡಿವೈಎಸ್‌ಪಿ ಎಂ.ಕೆ.ಗಣಪತಿ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮೇಲ್ನೋಟಕ್ಕೆ ಮಾಜಿ ಗೃಹ ಸಚಿವ ಕೆ.ಜೆ.ಜಾರ್ಜ್ ಅವರ ಕೈವಾಡ ಕಂಡುಬರುತ್ತಿಲ್ಲ ಎಂದು ಕಾನೂನು ಸಚಿವ ಟಿ.ಬಿ.ಜಯಚಂದ್ರ ಸ್ಪಷ್ಟಪಡಿಸಿದ್ದಾರೆ.
 
ತುಮಕೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಕಾನೂನು ಸಚಿವ ಟಿ.ಬಿ.ಜಯಚಂದ್ರ, ಮಂಗಳೂರು ಡಿವೈಎಸ್‌ಪಿ ಎ.ಕೆ.ಗಣಪತಿ ಆತ್ಮಹತ್ಯೆ ಪ್ರಕರಣದ ಸಿಐಡಿ ತನಿಖೆ ಪ್ರಗತಿಯಲ್ಲಿದೆ. ಮೇಲ್ನೊಟಕ್ಕೆ ಮಾಜಿ ಗೃಹ ಸಚಿವ ಕೆ.ಜೆ.ಜಾರ್ಜ್ ಅವರ ಕೈವಾಡ ಕಂಡುಬರುತ್ತಿಲ್ಲ. ಸಿಐಡಿ ತನಿಖೆಯ ನಂತರವಷ್ಟೇ ಸತ್ಯಾಸತ್ಯತೆ ಬಹಿರಂಗವಾಗಲಿದೆ ಎಂದು ತಿಳಿಸಿದರು.
 
ಮಂಗಳೂರು ಡಿವೈಎಸ್‌ಪಿ ಎ.ಕೆ.ಗಣಪತಿ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರತಿಪಕ್ಷಗಳು ಸದನದಲ್ಲಿ ಗದ್ದಲ ಮಾಡುವುದನ್ನು ಬಿಟ್ಟು, ಸದನದಲ್ಲಿ ಚರ್ಚೆಗೆ ಬರಲಿ. ಸುಮ್ಮನೆ ಆರೋಪ ಮಾಡುವುದು ಸರಿಯಲ್ಲ ಎಂದು ವಿಪಕ್ಷಗಳ ವಿರುದ್ಧ ಕಿಡಿಕಾರಿದ್ದಾರೆ.
 
ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರತಿಪಕ್ಷಗಳ ಗದ್ದಲದಿಂದ ಕಲಾಪಕ್ಕೆ ಅಡ್ಡಿ ಉಂಟಾಗುತ್ತಿದೆ. ಸದನದಲ್ಲಿ ರಾಜ್ಯದ ಅಭಿವೃದ್ಧಿ ಕುರಿತು ಚರ್ಚೆಗಳಾಗಲಿ ಎಂದು ಕಾನೂನು ಸಚಿವ ಟಿ.ಬಿ.ಜಯಚಂದ್ರ ಅಭಿಪ್ರಾಯ ಪಟ್ಟಿದ್ದಾರೆ.

ತಾಜಾ ಸುದ್ದಿಗಳಿಗಾಗಿ ವೆಬ್ ದುನಿಯಾ ಮೊಬೈಲ್ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ.

ವೆಬ್ದುನಿಯಾವನ್ನು ಓದಿ