ಜಾರ್ಜ್ ರಾಜೀನಾಮೆ ಜನತೆಗೆ ದೊರೆತ ಗೆಲುವು: ಸಿ.ಟಿ.ರವಿ

ಮಂಗಳವಾರ, 19 ಜುಲೈ 2016 (15:08 IST)
ಮಂಗಳೂರು ಡಿವೈಎಸ್‌ಪಿ ಎಂ.ಕೆ.ಗಣಪತಿ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಗೃಹ ಸಚಿವ ಕೆ.ಜೆ.ಜಾರ್ಜ್ ರಾಜೀನಾಮೆ ನೀಡಿರುವುದು ಜನತೆಗೆ ಸಿಕ್ಕ ಜಯ ಎಂದು ಬಿಜೆಪಿ ಶಾಸಕ ಸಿ.ಟಿ.ರವಿ ತಿಳಿಸಿದ್ದಾರೆ.
 
ಮಂಡ್ಯದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಬಿಜೆಪಿ ಶಾಸಕ ಸಿ.ಟಿ.ರವಿ, ಮಂಗಳೂರು ಡಿವೈಎಸ್‌ಪಿ ಎಂ.ಕೆ.ಗಣಪತಿ ಹಾಗೂ ಚಿಕ್ಕಮಗಳೂರು ಡಿವೈಎಸ್‌ಪಿ ಕಲ್ಲಪ್ಪ ಹಂಡಿಭಾಗ್ ಆತ್ಮಹತ್ಯೆ ಪ್ರಕರಣನ್ನು ಸಿಬಿಐ ತನಿಖೆಗೆ ನೀಡುವವರೆಗೂ ನಮ್ಮ ಹೋರಾಟ ಮುಂದುವರೆಯುತ್ತದೆ ಎಂದು ತಿಳಿಸಿದರು.
 
ಡಿವೈಎಸ್‌ಪಿ ಎಂ.ಕೆ.ಗಣಪತಿ ಆತ್ಮಹತ್ಯೆಕ್ಕೆ ಸಂಬಂಧಿಸಿದಂತೆ ತಪ್ಪಿತಸ್ಥರಿಗೆ ಕಠಿಣ ಶಿಕ್ಷೆಯಾಗಬೇಕು. ಪ್ರಕರಣದಲ್ಲಿ ಆರೋಪಿಗಳು ತಪ್ಪಿಸಿಕೊಳ್ಳದಂತೆ ರಾಜ್ಯ ಸರಕಾರ ನೋಡಿಕೊಳ್ಳಬೇಕು ಎಂದು ಆಗ್ರಹಿಸಿದರು.
 
ರಾಜ್ಯದಲ್ಲಿ ಪೊಲೀಸ್ ಇಲಾಖೆ ಸುಧಾರಣೆಯಾಗಬೇಕಾಗಿದೆ. ಪೊಲೀಸ್ ಅಧಿಕಾರಿಗಳ ದಕ್ಷ ಹಾಗೂ ಪ್ರಾಮಾಣಿಕವಾಗಿ ಸೇವೆ ಮಾಡಲು ಅವಕಾಶವೇ ಇಲ್ಲದಂತಾಗಿದೆ ಎಂದು ಬಿಜೆಪಿ ಶಾಸಕ ಸಿ.ಟಿ.ರವಿ ರಾಜ್ಯ ಸರಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ಮೊಬೈಲ್ ಆಪ್ ಡೌನ್‍ಲೋಡ್ ಮಾಡಿಕೊಳ್ಳಿ 

ವೆಬ್ದುನಿಯಾವನ್ನು ಓದಿ