3 ದಿನದೊಳಗೆ ಜಾರ್ಜ್ ರಾಜೀನಾಮೆ ಕೊಡ್ಬೇಕು, ಇಲ್ಲಾಂದ್ರೆ ರಾಜ್ಯಾದ್ಯಂತ ಹೋರಾಟ: ಬಿಎಸ್‌ವೈ
ಮಂಗಳವಾರ, 5 ಸೆಪ್ಟಂಬರ್ 2017 (18:35 IST)
ಡಿವೈಎಸ್‌ಪಿ ಎಂ.ಕೆ.ಗಣಪತಿ ಆತ್ಮಹತ್ಯೆ ಪ್ರಕರಣದಲ್ಲಿ ಸಚಿವ ಕೆ.ಜೆ. ಜಾರ್ಜ್ ವಿರುದ್ಧ ತನಿಖೆಗೆ ಆದೇಶಿಸಿದ್ದರಿಂದ ಅವರು ಕೂಡಲೇ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಲಿ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಒತ್ತಾಯಿಸಿದ್ದಾರೆ.
ಸಚಿವ ಕೆ.ಜೆ.ಜಾರ್ಜ್ ಮೂರು ದಿನಗಳೊಳಗಾಗಿ ತಮ್ಮ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಬೇಕು. ಇಲ್ಲವಾದರೆ, ಸಿಎಂ ಸಿದ್ದರಾಮಯ್ಯ ಅವರನ್ನು ಸಚಿವ ಸಂಪುಟದಿಂದ ಕಿತ್ತೊಗೆಯಬೇಕು ಎಂದು ಗಡುವು ನೀಡಿದ್ದಾರೆ.
ಮೂರು ದಿನಗಳೊಳಗೆ ಸಚಿವ ಜಾರ್ಜ್ ರಾಜೀನಾಮೆ ನೀಡದಿದ್ರೆ ರಾಜ್ಯಾದ್ಯಂತ ಹೋರಾಟ ಹಮ್ಮಿಕೊಳ್ಳಲಾಗುವುದು ಎಂದು ಎಚ್ಚರಿಸಿದ್ದಾರೆ. ಇಬ್ಬರು ಐಪಿಎಸ್ ಅಧಿಕಾರಿಗಳನ್ನು ಕೂಡಾ ಅಮಾನತ್ತುಗೊಳಿಸಬೇಕು ಎಂದು ತಿಳಿಸಿದ್ದಾರೆ.
ಸುಪ್ರೀಂಕೋರ್ಟ್ ಮೂರು ತಿಂಗಳೊಳಗೆ ತನಿಖೆ ನಡೆಸಿ ವರದಿ ಸಲ್ಲಿಸುವಂತೆ ಸಿಬಿಐಗೆ ಆದೇಶ ನೀಡಿದೆ. ಒಂದು ವೇಳೆ ಜಾರ್ಜ್ ನಿರಪರಾಧಿ ಎಂದು ಸಾಬೀತಾದಲ್ಲಿ ಅವರು ಮತ್ತೆ ಸಚಿವ ಸ್ಥಾನ ಅಲಂಕರಿಸಲಿ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಸಲಹೆ ನೀಡಿದ್ದಾರೆ.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ.