ಈ ಕುರಿತು ಟ್ವೀಟ್ ಮಾಡಿದ ಕೇಂದ್ರ ಸಚಿವ ಸದಾನಂದಾ ಗೌಡರು, ಸಾರಸ್ವತ ಲೋಕಕ್ಕೆ ಅವರ ಕೊಡುಗೆ ಅಪಾರ .ಅಗಲಿದ ಆತ್ಮಕ್ಕೆ ಶಾಂತಿ ದೊರೆಯಲೆಂದು ಭಗವಂತನಲ್ಲಿ ಪ್ರಾರ್ಥಿಸೋಣ ಎಂದು ಸಂತಾಪ ಸೂಚಿಸಿದ್ದಾರೆ.
ಹಾಗೇ ಮಾಜಿ ಸಿಎಂ ಸಿದ್ದರಾಮಯ್ಯ ಅವರು, ಹಿರಿಯ ಸಾಹಿತಿ,ಚಿಂತಕ, ಜ್ಞಾನಪೀಠ ಪ್ರಶಸ್ತಿ ಪುರಸ್ಕೃತ ಗಿರೀಶ್ ಕಾರ್ನಾಡ್ ಅವರ ನಿಧನದಿಂದ ನಾಡಿನ ಬಹುಮುಖ್ಯ ಸಾಕ್ಷಿಪ್ರಜ್ಞೆಯ ದನಿ ಮೌನವಾದಂತಾಗಿದೆ. ಈ ದುರಿತದ ಕಾಲದಲ್ಲಿ ಅವರು ನಮ್ಮೊಡನೆ ಇನ್ನಷ್ಟು ಕಾಲ ಇರಬೇಕಿತ್ತು ಎಂದು ಟ್ವೀಟ್ ಮೂಲಕ ಕಂಬನಿ ಮಿಡಿದಿದ್ದಾರೆ.
ಇವರ ಜೊತೆಗೆ ಜಿಟಿ ದೇವೇಗೌಡರು, ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರು, ಅರವಿಂದ ಕ್ರೇಜಿವಾಲ್, ಸುಷ್ಮಾ ಸ್ವರಾಜ್, ಹಾಗೂ ಪ್ರಧಾನಿ ನರೇಂದ್ರ ಮೋದಿ ಅವರು ಕೂಡ ಗಿರೀಶ್ ಕಾರ್ನಾಡ್ ಅವರ ನಿಧನಕ್ಕೆ ಸಂತಾಪ ಸೂಚಿಸಿದ್ದಾರೆ.