ತಾಯಿಗೆ ಟೋಪಿ ಹಾಕಿ ಮಗಳು ಎಸ್ಕೇಪ್: ಜೆಪಿ ನಗರ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್

ಶನಿವಾರ, 13 ನವೆಂಬರ್ 2021 (21:42 IST)
fir

ಬೆಂಗಳೂರು: ಕೋಟಿ ರೂಪಾಯಿ ಬೆಲೆ ಬಾಳುವ ಚಿನ್ನಾಭರಣ ವಂಚಿಸಿದ ಆರೋಪದ ಮೇಲೆ ತಾಯಿಯೇ ಮಗಳ ಮೇಲೆ ದೂರು ದಾಖಲಿಸಿರುವ ಘಟನೆ ರಾಜಧಾನಿಯ ಜೆಪಿ ನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.
 
ಸುಮಾರು 4 ಕೋಟಿ ಮೌಲ್ಯದ 7.5 ಕೆಜಿ ವಜ್ರ ಹಾಗೂ ಚಿನ್ನಾಭರಣ ವಂಚಿಸಿದ್ದಾಳೆ ಎಂದು ಮಗಳ ವಿರುದ್ಧವೇ ತಾಯಿ ದೂರು ನೀಡಿದ್ದಾರೆ.ಈ ಸಂಬಂಧ  ಜೆ.ಪಿ ನಗರ ಪೊಲೀಸ್ ಠಾಣೆಯಲ್ಲಿ ಎಫ್‌.ಐ.ಆರ್ ದಾಖಲಾಗಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.
 
ವಿಜಯಲಕ್ಷ್ಮಿ ಎನ್ನುವವರು ಮಗಳು ತೇಜವಂತಿ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ. ವಿಜಯಲಕ್ಷ್ಮಿ ಕೆಲ ದಿನಗಳ ಹಿಂದೆ ಶಸ್ತ್ರಚಿಕಿತ್ಸೆ ಗೆ ಒಳಗಾಗಿದ್ದರು. ಈ ವೇಳೆ ಮನೆಗೆ ಬಂದಿದ್ದ ತೇಜವಂತಿ ಲಾಕರ್‌ನಲ್ಲಿ ಸುರಕ್ಷಿತವಾಗಿ ಇಡುವುದಾಗಿ ಹೇಳಿ ಚಿನ್ನ ತೆಗೆದುಕೊಂಡು ಹೋಗಿದ್ದಳು. ಆದರೆ ಚಿನ್ನ ತೆಗೆದುಕೊಂಡು ಹೋದ ನಂತರ ತೇಜವಂತಿ ನಾಪತ್ತೆಯಾಗಿದ್ದಾಳೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ ಎಂದಿದ್ದಾರೆ.
 
ಈ ಕುರಿತು ವಿಜಯಲಕ್ಷ್ಮಿ ದಕ್ಷಿಣ ವಿಭಾಗದ  ಜೆ.ಪಿ ನಗರ ಠಾಣೆಗೆ ದೂರು ನೀಡಿದ್ದಾರೆ. ಭಾರತೀಯ ದಂಡಸಂಹಿತೆಯ ಸೆಕ್ಷನ್ 420ರ ಅಡಿಯಲ್ಲಿ ಎಫ್‌ಐಆರ್ ದಾಖಲಾಗಿದ್ದು, ಮಗಳು ತೇಜವಂತೆ ಪತ್ತೆಗೆ ಕ್ರಮ ಕೈಗೊಳ್ಳಲಾಗಿದೆ ಎಂದು ಮಾಹಿತಿ ನೀಡಿದ್ದಾರೆ.
 

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ