ಅಪ್ರಾಪ್ತೆಯ ಮೇಲೆ 30 ಕ್ಕೂ ಹೆಚ್ಚು ಬಾರಿ ಅತ್ಯಾಚಾರ ಮಾಡಿದ ಕಾಮುಕ ಅರೆಸ್ಟ್

ಬುಧವಾರ, 11 ಅಕ್ಟೋಬರ್ 2017 (15:23 IST)
ಅಪ್ರಾಪ್ತಳ ಮೇಲೆ 30ಕ್ಕೂ ಹೆಚ್ಚು ಬಾರಿ ಅತ್ಯಾಚಾರವೆಸಗಿದ ನೀಚ ಕಾಮುಕನನ್ನು ಪೊಲೀಸರು ಬಂಧಿಸಿದ್ದಾರೆ.
ಲಿವಿಂಗ್ ಟುಗೇದರ್‌ನಲ್ಲಿದ್ದ ಪ್ರೇಯಸಿಯ ಅಪ್ರಾಪ್ತ ಮಗಳನ್ನು ಬೆದರಿಸಿ ಅತ್ಯಾಚಾರವೆಸಗಿದ್ದಾನೆ. ನಂತರ ಅತ್ಯಾಚಾರವೆಸಗುತ್ತಿರುವ ದೃಶ್ಯವನ್ನು ವಿಡಿಯೋ ಮಾಡಿ, ಹೇಳಿದಂತೆ ಕೇಳಿದಿದ್ದಲ್ಲಿ ವಿಡಿಯೋ ಇಂಟರ್‌ನೆಟ್‌ನಲ್ಲಿ ಹಾಕುವುದಾಗಿ ಬೆದರಿಕೆಯೊಡ್ಡಿದ್ದಾನೆ ಎನ್ನಲಾಗಿದೆ.
 
ಬಾಲಕಿಯ ಮೇಲೆ ನಿರಂತರವಾಗಿ ಅತ್ಯಾಚಾರವೆಸಗಿ ಕಾಮುಕತನ ಮೆರೆದಿದ್ದಾನೆ. ಮಗಳ ದೇಹದಲ್ಲಾಗುತ್ತಿರುವ ಬದಲಾವಣೆಗಳಿಂದ ಆತಂಕಗೊಂಡು ಪ್ರಶ್ನಿಸಿದಾಗ ಆರೋಪಿಯ ನೀಚತನ ಬಹಿರಂಗವಾಗಿದೆ ಎಂದು ಮೂಲಗಳು ತಿಳಿಸಿವೆ.
 
ಬಾಲಕಿಯ ತಾಯಿ ಜೀವನವಿಮಾ ನಗರ ಠಾಣೆಯಲ್ಲಿ ಆರೋಪಿಯ ವಿರುದ್ಧ ಅತ್ಯಾಚಾರದ ದೂರು ದಾಖಲಿಸಿದ್ದಾರೆ. ಆರೋಪಿಯನ್ನು ಬಂಧಿಸಿರುವ ಪೊಲೀಸರು ಆತನ ವಿರುದ್ಧ ಪೋಸ್ಕೋ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಂಡು ವಿಚಾರಣೆ ಮುಂದುವರಿಸಿದ್ದಾರೆ.  
 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ