ಮಂಡ್ಯ: ಸಂಚಾರಿ ಪೊಲೀಸರ ಯಡವಟ್ಟಿನಿಗೆ ಮೂರುವರೆ ವರ್ಷದ ಮಗು ಅಸುನೀಗಿದ ಹೃದಯ ವಿದ್ರಾವಕ ಘಟನೆ ಬೆನ್ನಲ್ಲೇ ಮೂವರು ಎಎಸ್‌ಐಗಳ ವಿರುದ್ಧ ಕ್ರಮ ಕೈಗೊಳ್ಳಲಾಗಿದೆ.
ಘಟನಾ ಸ್ಥಳದಲ್ಲಿ ಹೆಲ್ಮೆಟ್ ತಪಾಸಣೆ ಮಾಡುತ್ತಿದ್ದ ಎಎಸ್‌ಐಗಳಾದ ನಾಗರಾಜು, ಜಯರಾಂ, ಗುರುದೇವ್ ಅವರನ್ನು ಅಮಾನತುಗೊಳಿಸಿರುವುದಾಗಿ ಮಂಡ್ಯ ಎಸ್ಪಿ ಮಲ್ಲಿಕಾರ್ಜುನ ಬಾಲದಂಡಿ ಮಾಹಿತಿ ನೀಡಿದ್ದಾರೆ.
ಮಂಡ್ಯದ ಸ್ವರ್ಣಸಂದ್ರ ಬಳಿ ಹೆಲ್ಮೆಟ್ ತಪಾಸಣೆಗೆಂದು ಬೈಕ್ ಅನ್ನು ಅಡ್ಡಗಟ್ಟಿದ್ದಾರೆ. ಈ ವೇಳೆ ನಿಯಂತ್ರಣ ತಪ್ಪಿ ಬೈಕ್ ಬಿದ್ದಿದ್ದು, ಮಗುವೂ ಕೆಳಗೆ ಬಿದ್ದಿದೆ. ಈ ವೇಳೆ ಹಿಂದಿನಿಂದ ಬರುತ್ತಿದ್ದ ವಾಹನ ಮಗುವಿನ ಮೇಲೆ ಹರಿದಿದೆ. ಮಗುವಿನ ತಲೆಗೆ ಬಲವಾದ ಪೆಟ್ಟು ಬಿದ್ದಿದ್ದು, ತೀವ್ರ ರಕ್ತಸ್ರವಾದಿಂದ ಮಗು ಸ್ಥಳದಲ್ಲೇ ಸಾವನ್ನಪ್ಪಿದೆ.
ಮೃತ ಬಾಲಕಿಯನ್ನು ಮದ್ದೂರು ತಾಲೂಕಿನ ಗೊರವನಹಳ್ಳಿಯ ಅಶೋಕ್ ವಾಣಿ ದಂಪತಿಯ ಪುತ್ರಿ ಹೃತೀಕ್ಷಾ ಎಂದು ತಿಳಿದು ಬಂದಿದೆ.
ಮಗುವಿನ ಪೋಷಕರು ಪುತ್ರಿಗೆ ನಾಯಿ ಕಚ್ಚಿದ್ದರಿಂದ ಆಸ್ಪತ್ರೆಗೆ ಕರೆದುಕೊಂಡು ಬರುತ್ತಿದ್ದರು. ಈ ವೇಳೆ ಈ ಘಟನೆ ನಡೆದಿದೆ.