ಎಐಸಿಸಿ ಉಪಾಧ್ಯಕ್ಷ ರಾಹುಲ್ ಗಾಂಧಿ ಡಾ.ರಾಜ್ ನಿವಾಸಕ್ಕೆ ಭೇಟಿ ನೀಡಿದ ಸಂದರ್ಭದಲ್ಲಿ ರಾಜಕೀಯ ಚರ್ಚೆ ನಡೆದಿದೆ. ಗೀತಾ ಶಿವರಾಜ್ ಕುಮಾರ್ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗಲಿದ್ದು, ಶಿವಮೊಗ್ಗದಿಂದ ಸ್ಪರ್ಧಿಸುವ ಸಾಧ್ಯತೆಗಳಿವೆ ಎನ್ನುವ ವರದಿಗಳು ಹರಡಿದ್ದವು.
ಇಂಧನ ಖಾತೆ ಸಚಿವ ಡಿ.ಕೆ.ಶಿವಕುಮಾರ್, ರಾಹುಲ್ ಗಾಂಧಿಯವರಿಗೆ ಗೀತಾ ಶಿವರಾಜ ಕುಮಾರ್ರನ್ನು ಮಾಜಿ ಸಿಎಂ ಬಂಗಾರಪ್ಪ ಪುತ್ರಿ ಎಂದು ಪರಿಚಯಿಸಿ, ಒಂದು ವೇಳೆ, ಶಿವಮೊಗ್ಗ ಕ್ಷೇತ್ರಕ್ಕೆ ಕಾಂಗ್ರೆಸ್ ಪಕ್ಷದಿಂದ ಗೀತಾ ಅವರಿಗೆ ಟಿಕೆಟ್ ನೀಡಿದಲ್ಲಿ ಗೆಲುವು ಖಚಿತ ಎಂದು ಹೇಳಿದ್ದಾಗಿ ಮಾಧ್ಯಮಗಳು ವರದಿ ಮಾಡಿದ್ದವು.
ಇದೀಗ ಸ್ಪಷ್ಟನೆ ನೀಡಿರುವ ಪರಮೇಶ್ವರ್, ಅಂತಹ ಯಾವುದೇ ಬೆಳವಣಿಗೆಗಳು ನಡೆದಿಲ್ಲ. ಡಾ.ರಾಜಕುಮಾರ್ ನಿವಾಸದಲ್ಲಿ ರಾಜಕೀಯದ ಬಗ್ಗೆ ಚರ್ಚೆಯೇ ಆಗಿಲ್ಲ. ರಾಹುಲ್ ಗಾಂಧಿ ಡಾ.ರಾಜ್ ಕುಟುಂಬಕ್ಕೆ ಸಾಂತ್ವನ ಹೇಳಲು ಮಾತ್ರ ತೆರಲಿದ್ದರು ಎಂದು ತಿಳಿಸಿದ್ದಾರೆ.