ಮಂಗಳೂರು : ಪ್ರವೀಣ್ ನೆಟ್ಟಾರು ಅವರ ಪತ್ನಿ ನೂತನ ಕುಮಾರಿ ಅವರಿಗೆ ಅನುಕಂಪದ ಆಧಾರದಲ್ಲಿ ಬೊಮ್ಮಾಯಿ ಸರ್ಕಾರ ಉದ್ಯೋಗ ನೀಡಿತ್ತು. ಆದರೆ ಕಾಂಗ್ರೆಸ್ ಕರ್ನಾಟಕದಲ್ಲಿ ಅಧಿಕಾರಕ್ಕೆ ಬರುತ್ತಲೇ ಅವರ ಸರ್ಕಾರಿ ಉದ್ಯೋಗವನ್ನು ಕಿತ್ತುಕೊಂಡಿದೆ.
ನೆಟ್ಟಾರು ಪತ್ನಿ ಅವರ ಉದ್ಯೋಗವನ್ನು ಮರಳಿ ನೀಡುವಂತೆ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಸಿಎಂ ಸಿದ್ದರಾಮಯ್ಯ ಅವರಲ್ಲಿ ಮನವಿ ಮಾಡಿಕೊಂಡಿದ್ದಾರೆ.
ಮಂಗಳೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಕಟೀಲ್, ಪೂರ್ಣ ಬಹುಮತ ಪಡೆದ ಕಾಂಗ್ರೆಸ್ ಸರ್ಕಾರ ಜನರಿಗೆ ನೀಡಿದ ಗ್ಯಾರಂಟಿಗಳ ಬಗ್ಗೆ ಹಾಗೂ ಜನರ ಸಮಸ್ಯೆ ಪರಿಹಾರ ಮಾಡೋ ಬದಲು ಅಧಿಕಾರ ಹಂಚಿಕೆಯ ಚರ್ಚೆಯಲ್ಲೇ ಇದೆ.
ನಮ್ಮ ಬಿಜೆಪಿ ಶಾಸಕ ಹರೀಶ್ ಪೂಂಜಾ ಸೇರಿದಂತೆ ನಾಯಕರ ಮೇಲೆ ವಿನಾ ಕಾರಣ ಎಫ್ಐಆರ್ ದಾಖಲು ಮಾಡುತ್ತಿದ್ದಾರೆ. ಕಾಂಗ್ರೆಸ್ ದ್ವೇಷ ಸಾಧನೆಯ ಮೂಲಕ ಬಿಜೆಪಿಯನ್ನು ಕಟ್ಟಿ ಹಾಕುತ್ತಿದೆ. ಬಿಜೆಪಿ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಪತ್ನಿಗೆ ಬಿಜೆಪಿ ಸರ್ಕಾರ ಅನುಕಂಪದ ಆಧಾರದ ಮೇಲೆ ನೀಡಿದ ಉದ್ಯೋಗವನ್ನು ಕಿತ್ತುಕೊಂಡಿದೆ. ಹೀಗಾಗಿ ಮತ್ತೆ ಉದ್ಯೋಗ ನೀಡಬೇಕೆಂದು ಸಿದ್ದರಾಮಯ್ಯಗೆ ಕಟೀಲ್ ಒತ್ತಾಯಿಸಿದರು.