ಬೆಂಗಳೂರು : ಕಾಂಗ್ರೆಸ್ನವ್ರಿಗೆ ರಾಷ್ಟ್ರೀಯವಾದಿಗಳ ಇತಿಹಾಸ ಹೇಳಿದ್ರೆ ಮೈಯೆಲ್ಲಾ ಉರಿಯುತ್ತೆ. ಭಗತ್ ಸಿಂಗ್, ರಾಜ್ಗುರು, ಸಾವರ್ಕರ್ ಇತಿಹಾಸ ಕೇಳೋದಿಲ್ಲ. ರಾಷ್ಟ್ರೀಯತೆಯನ್ನ ಕಂಡರೆ ಅವರಿಗೆ ಕೋಪ, ಎಲ್ಲರೂ ಒಂದುಗೂಡುವುದು ಅವರಿಗೆ ಇಷ್ಟವಿಲ್ಲ ಎಂದು ಯುವಬ್ರಿಗೆಡ್ ಸಂಸ್ಥಾಪಕ ಚಕ್ರವರ್ತಿ ಸೂಲಿಬೆಲೆ ವಾಗ್ದಾಳಿ ನಡೆಸಿದ್ದಾರೆ.
ಚಕ್ರವರ್ತಿ ಸೂಲಿಬೆಲೆ ಬರೆದಿರೋ ಪಠ್ಯ ತೆಗೆಯುತ್ತೇವೆ ಎಂಬ ಸಚಿವ ಪ್ರಿಯಾಂಕ್ ಖರ್ಗೆ ಅವರ ಹೇಳಿಕೆಗೆ ಸೂಲಿಬೆಲೆ ತಿರುಗೇಟು ನೀಡಿದ್ದಾರೆ.
ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ ಸರ್ಕಾರಕ್ಕೆ ಪಠ್ಯಪುಸ್ತಕದ ಕೆಲಸವೇ ಆದ್ಯತೆಯ ಕೆಲಸ ಅನ್ನೋದು ಅಚ್ಚರಿಯಾಗಿಬಿಟ್ಟಿದೆ. ಪ್ರಿಯಾಂಕ್ ಖರ್ಗೆ ಅವರು ನನ್ನ ವಿದ್ಯಾರ್ಹತೆಯನ್ನ ಪ್ರಶ್ನೆ ಮಾಡಿದ್ದಾರೆ. ಜನ ಏನಾದ್ರೂ ಅವರ ವಿದ್ಯಾರ್ಹತೆ ಪ್ರಶ್ನೆ ಮಾಡಿದ್ರೆ ಕಷ್ಟ ಆಗೋದು ಅವರಿಗೇನೆ. ನನ್ನ ಬಗ್ಗೆ ಮಾತನಾಡದೇ ಇದ್ದರೆ ಒಳ್ಳೆಯದು ಎಂದು ಕುಟುಕಿದ್ದಾರೆ.