ದೇಗುಲ, ಮಠ, ಮಂದಿರಗಳಿಗೆ ಹೋಗುವುದನ್ನು ಕಡಿಮೆ ಮಾಡಿ, ಶಿಕ್ಷಣದತ್ತ ಗಮನ ಕೊಡಿ ಎಂದು ಸಮಾಜ ಕಲ್ಯಾಣ ಇಲಾಖೆ ಸಚಿವ ಎಚ್.ಆಂಜನೇಯ ವಾಲ್ಮೀಕಿ ಸಮುದಾಯಕ್ಕೆ ಕಿವಿಮಾತು ಹೇಳಿದ್ದಾರೆ.
ವಿಧಾನಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ವಾಲ್ಮೀಕಿ ಸಮುದಾಯದ ಜನತೆ ವಿಧಾನಸೌಧ, ಸಂಸತ್‌ಗೆ ಬರುವತ್ತ ಗಮನ ನೀಡಬೇಕು ಎಂದು ಹೇಳಿದರು.