ಬೆಂಗಳೂರು : ಮಕ್ಕಳಿಗೆ ಅಗತ್ಯವಿರುವ ಮೂಲಭೂತ ಸೌಕರ್ಯಗಳನ್ನು ನೀಡಲು ಮೊದಲನೇ ಪ್ರಾಶಸ್ತ್ಯ ನೀಡಬೇಕು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಅಧಿಕಾರಿಗಳಿಗೆ ಸ್ಪಷ್ಟ ನಿರ್ದೇಶನ ನೀಡಿದರು.
ಸಮಾಜ ಕಲ್ಯಾಣ ಇಲಾಖೆ, ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘದ ವತಿಯಿಂದ ಅರಮನೆ ಮೈದಾನದ ತ್ರಿಪುರವಾಸಿನಿಯಲ್ಲಿ ಆಯೋಜಿಸಿರುವ ʼವಿಜ್ಞಾನ ಮೇಳ-2023ʼ ಉದ್ಘಾಟಿಸಿ ಮಾತನಾಡಿದ ಅವರು, ವಸತಿ ಶಿಕ್ಷಣ ಸಂಸ್ಥೆಗೆ ಸಾವಿರಾರು ಕೋಟಿ ರೂ. ಖರ್ಚು ಮಾಡುತ್ತೇವೆ. ನಾವು ಕಟ್ಟಡ, ಕಾಂಪೌಂಡ್, ಗೋಡೆಗಳಿಗೆ ಬಹಳ ಖರ್ಚು ಮಾಡುತ್ತಿದ್ದೇವೆ.
ಈಗಾಗಲೇ ಸಚಿವ ಸಂಪುಟ ಸಭೆಗಳಲ್ಲಿ ಹೇಳಿರುವಂತೆ ಮಕ್ಕಳಿಗೆ ಮಾಡಬೇಕಿರುವ ವ್ಯವಸ್ಥೆಗಳ ಬಗ್ಗೆ ವಿಶೇಷ ಗಮನ ನೀಡಬೇಕು. ಮಾಡಲೇಬೇಕಾದ ಬದಲಾವಣೆಗಳನ್ನು ತನ್ನಿ. ನಂತರ ಉಳಿದ ವಿಷಯಗಳಿಗೆ ಗಮನ ನೀಡಿ ಎಂದು ಅಧಿಕಾರಿಗಳಿಗೆ ಸೂಚಿಸಿದರು.