ಕಳೆದ ವಾರದಿಂದ ಅಬ್ಬರಿಸಿದ್ದ ಮಳೆ ವಿರಾಮ ನೀಡಿದ್ದರೂ, ಅನಾಹುತಗಳು ಮಾತ್ರ ಇನ್ನೂ ನಿಂತಿಲ್ಲ.

ಸೋಮವಾರ, 22 ನವೆಂಬರ್ 2021 (21:45 IST)
ಬೆಂಗಳೂರು: ಕಳೆದ ವಾರದಿಂದ ಅಬ್ಬರಿಸಿದ್ದ ಮಳೆ ವಿರಾಮ ನೀಡಿದ್ದರೂ, ಅನಾಹುತಗಳು ಮಾತ್ರ ಇನ್ನೂ ನಿಂತಿಲ್ಲ.
ಕಟಾವಿಗೆ ಬಂದ ಬೆಳೆಗಳ ಜಮೀನಿನಲ್ಲಿ ಹಾಗೂ ಜನವಸತಿ ಪ್ರದೇಶದಲ್ಲಿ ನೀರು ನಿಂತಿದ್ದು, ಜನರು ಪರದಾಡುತ್ತಿದ್ದಾರೆ. ಸರ್ಕಾರದ ವರದಿ ಪ್ರಕಾರ 2.50 ಲಕ್ಷ ಹೆಕ್ಟೇರ್ ಪ್ರದೇಶದ ಬೆಳೆ ಹಾನಿಯಾಗಿದ್ದು, ರೈತರಿಗೆ ಸಂಕಷ್ಟ ಎದುರಾಗಿದೆ.
ಜಮೀನಿನಲ್ಲಿ ನೀರು ನಿಂತಿದ್ದು, ಬೆಳೆ ಸಂಪೂರ್ಣ ನಾಶವಾಗಿದೆ. ಇದರ ನೇರ ಪರಿಣಾಮ ಬೆಲೆ ಜನರಿಗೆ ಬಿದ್ದಿದೆ. ತರಕಾರಿ ಸೇರಿ ಅಗತ್ಯ ವಸ್ತುಗಳ ಬೆಳೆ ಗಗನಕ್ಕೇರುವ ಸಾಧ್ಯತೆ ಹೆಚ್ಚಾಗಿದೆ. ಅಕಾಲಿಕ ಮಳೆಯಿಂದ ಜಲಾಶಯಗಳಿಂದ ಬಾರೀ ಪ್ರಮಾಣದ ನೀರು ಹೊರ ಬಿಡಲಾಗಿದ್ದು, ಕೆಲ ಸಂಪರ್ಕ ಸೇತುವೆ ಮುಳುಗಡೆಯಾಗಿವೆ.
ರಾಜ್ಯಾದ್ಯಂತ ಮಳೆ ಪ್ರಮಾಣ ಕಡಿಮೆಯಾಗಿದ್ದು, ಮುಂದಿನ ಎರಡು ದಿನ ಕರಾವಳಿ, ದಕ್ಷಿಣ  ಒಳನಾಡು ಪ್ರದೇಶದ ಕೆಲವು ಕಡೆ ಚದುರಿದಂತೆ ಹಗುರದಿಂದ ಸಾಮಾನ್ಯ ಮಳೆಯಾಗುವ ಸಾಧ್ಯತೆಯಿದೆ. ರಾಜ್ಯದ ಕೆಲವು ಪ್ರದೇಶಗಳಲ್ಲಿ ಗುಡುಗು-ಮಿಂಚು ಸಹಿತ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
 

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ