ಅಜ್ಜಯ್ಯನ ಬಳಿ ಹೋಗಿ ಆಣೆ ಮಾಡು’-ಸಚಿವ ಅಶ್ವತ್ಥ್ ನಾರಾಯಣ್

ಶುಕ್ರವಾರ, 11 ಆಗಸ್ಟ್ 2023 (21:20 IST)
ಸಿಎಂ ಡಿ.ಕೆ.ಶಿವಕುಮಾರ್​​ ವಿರುದ್ಧ ಮಾಜಿ ಸಚಿವ ಅಶ್ವತ್ಥ್ ನಾರಾಯಣ್ ಕಿಡಿಕಾರಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಅವರು, ನಿಮಗೆ ತಾಕತ್, ಧಮ್ ಇದ್ದರೆ ಅಜ್ಜಯ್ಯನ ಬಳಿ ಹೋಗಿ ಪ್ರಮಾಣ ಮಾಡಿ. ಎಲ್ಲದಕ್ಕೂ ಅಜ್ಜಯ್ಯನ ಬಳಿ ಹೋಗ್ತಾರಲ್ಲ, ಹೋಗಪ್ಪ ಅಜ್ಜಯ್ಯನ ಬಳಿ ಹೋಗಿ ಆಣೆ ಮಾಡು ಅಂತಾ ಸವಾಲಾಕಿದ್ದಾರೆ.. ಡಿ.ಕೆ.ಶಿವಕುಮಾರ್, ಚಲುವರಾಯಸ್ವಾಮಿ ಮೇಲೆ ಲೋಕಾಯುಕ್ತ ತನಿಖೆ ಆಗಲೇಬೇಕು. ಡಿ.ಕೆ.ಶಿವಕುಮಾರ್ ಅವರೇ ನೀವು ಭಯ ಪಡಬೇಡಿ. ರಾಜ್ಯಾಧ್ಯಕ್ಷರ ನೇತೃತ್ವದಲ್ಲಿ ವಿಪಕ್ಷವಾಗಿ ಬಿಜೆಪಿ ಹೋರಾಟ ಮಾಡಲಿದೆ. ಮಾಜಿ ಸಿಎಂ ಯಡಿಯೂರಪ್ಪ, ಮಾಜಿ ಸಿಎಂ ಬೊಮ್ಮಾಯಿ, ಮಾಜಿ ಸಚಿವ ಅಶೋಕ್ ಸೇರಿ ಎಲ್ಲರೂ ಇದ್ದಾರೆ. ಇವರ ನಾಯಕತ್ವದಲ್ಲಿ ಹೋರಾಟ ಮಾಡುತ್ತೇವೆ ಅಂತಾ ಡಿ.ಕೆ.ಶಿವಕುಮಾರ್ ವಿರುದ್ಧ ಅಶ್ವತ್ಥ್ ನಾರಾಯಣ್ ಕಿಡಿಕಾರಿದ್ದಾರೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ