ಗೋವಾ ಸಿಎಂ ಮಾನಸಿಕ ಸ್ಥಿಮಿತ ಕಳೆದುಕೊಂಡಿದ್ದಾರೆ: ಡಿಸಿಎಂ ಡಿಕೆ ಶಿವಕುಮಾರ್‌

Sampriya

ಗುರುವಾರ, 24 ಜುಲೈ 2025 (17:58 IST)
ಬೆಂಗಳೂರು: ಮಹದಾಯಿ ನದಿ ನೀರಿನ ಯೋಜನೆಯ ಕುರಿತು ಗೋವಾ ಮುಖ್ಯಮಂತ್ರಿ ಪ್ರಮೋದ್ ಸಾವಂತ್ ಅವರ ಹೇಳಿಕೆಗೆ ಆಕ್ರೋಶ ಹೊರಹಾಕಿದ ಡಿಸಿಎಂ ಡಿಕೆ ಶಿವಕುಮಾರ್ ಅವರು ಗೋವಾ ಸಿಎಂ ಮಾನಸಿಕ ಸಮತೋಲನವನ್ನು ಕಳೆದುಕೊಂಡಿದ್ದಾರೆ ಎಂದಿದ್ದಾರೆ. 

ಪ್ರಮೋದ್ ಸಾವಂತ್ ಮಾನಸಿಕ ಸಮತೋಲನವನ್ನು ಕಳೆದುಕೊಂಡಿದ್ದಾರೆ. ರಾಜ್ಯವು ಯೋಜನೆಯನ್ನು ಮುಂದುವರಿಸಲಿದೆ ಎಂದು ಕೌಂಟರ್ ನೀಡಿದ್ದಾರೆ.

ಕರ್ನಾಟಕದ ಭೂಮಿಯಲ್ಲಿ ಕೆಲಸ ಕೈಗೆತ್ತಿಕೊಳ್ಳಲಾಗುತ್ತಿದೆ ಎಂದು ಸಮರ್ಥಿಸಿಕೊಂಡ ಡಿ.ಕೆ.ಶಿವಕುಮಾರ್ ಅವರು ಸರ್ಕಾರವು ಮುಂದುವರಿಯುವ ಉದ್ದೇಶವನ್ನು ದೃಢಪಡಿಸಿದರು. 

ಅಂತರ್ ರಾಜ್ಯ ಸಂಬಂಧಗಳ ಮಹತ್ವದ ಬಗ್ಗೆ ಗೋವಾ ಮುಖ್ಯಮಂತ್ರಿಗೆ ನೆನಪಿಸಿ, ಈ ವಿಷಯದ ಬಗ್ಗೆ ಚರ್ಚಿಸಲು ಪ್ರಧಾನಿ ನರೇಂದ್ರ ಮೋದಿ ಮತ್ತು ಸಂಬಂಧಪಟ್ಟ ಕೇಂದ್ರ ಸಚಿವರನ್ನು ಭೇಟಿ ಮಾಡುವುದಾಗಿ ಹೇಳಿದರು.

ಮಂಗಳವಾರ ಗೋವಾ ಸಿಎಂ ಸಾವಂತ್ ಮಾತನಾಡಿ, ಕೇಂದ್ರವು ಮಹದಾಯಿ ಯೋಜನೆಯನ್ನು ಅನುಮೋದಿಸುವುದಿಲ್ಲ. ಮಹದಾಯಿ ನದಿ ನೀರನ್ನು ತಿರುಗಿಸುವ ಗುರಿಯನ್ನು ಹೊಂದಿರುವ ಚಟುವಟಿಕೆಗಳನ್ನು ನಡೆಸುತ್ತಿರುವ ಕರ್ನಾಟಕದ ವಿರುದ್ಧ ಗೋವಾ ಸರಕಾರವು ಸುಪ್ರೀಂ ಕೋರ್ಟ್‌ನಲ್ಲಿ ನ್ಯಾಯಾಂಗ ನಿಂದನೆ ಅರ್ಜಿಯನ್ನು ಸಲ್ಲಿಸಲಿದೆ ಎಂದು ಹೇಳಿದ್ದರು.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ