ಕೇಂದ್ರ ಗೃಹ ಸಚಿವರ ಅಧ್ಯಕ್ಷತೆಯ ಸಭೆಗೆ ಹೋಗುವೆ : ಬೊಮ್ಮಾಯಿ

ಭಾನುವಾರ, 11 ಡಿಸೆಂಬರ್ 2022 (13:06 IST)
ಬೆಂಗಳೂರು : ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಅಧ್ಯಕ್ಷತೆಯಲ್ಲಿ ಮಹಾರಾಷ್ಟ್ರ ಮುಖ್ಯಮಂತ್ರಿಗಳೊಂದಿಗೆ ಡಿಸೆಂಬರ್ 14 ಅಥವಾ 15ರಂದು ಸಭೆ ನಡೆಯಲಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.

ವಿಧಾನಸೌಧದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಸೋಮವಾರದಂದು ಸಂಸದರ ನಿಯೋಗ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಭೇಟಿಯಾಗಲಿದೆ. ನಾನೂ ಕೂಡ ಅಮಿತ್ ಶಾ ಅವರೊಂದಿಗೆ ಮಾತನಾಡಿದ್ದೇನೆ. ಅವರು ಹೇಳಿ ಕಳಿಸಿದಾಗ ಬರಬೇಕಾಗುವುದು ಎಂದು ಹೇಳಿದ್ದಾರೆ ಎಂದರು.

ಕರ್ನಾಟಕದ ವಿಚಾರ, ನಿಲುವು, ವಾಸ್ತವಾಂಶವನ್ನು ಈಗಾಗಲೇ ತಿಳಿಸಲಾಗಿದೆ. ಹಲವಾರು ವಿವರಗಳನ್ನು ಸಹ ನೀಡಲಾಗಿದೆ. ಭೇಟಿಯಾದ ಸಂದರ್ಭದಲ್ಲಿ ಕರ್ನಾಟಕದ ನಿಲುವನ್ನು ಅವರಿಗೆ ಸ್ಪಷ್ಟಪಡಿಸಲಾಗುವುದು ಎಂದರು.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ