Gold fraud case: ಇಡಿ ದಾಳಿ ವೇಳೆ ಐಶ್ವರ್ಯಾ ಗೌಡ ಮನೆಯಲ್ಲಿ ಸಿಕ್ತು ಕಂತೆ ಕಂತೆ ಹಣ, ಇಲ್ಲಿದೆ ಮಾಹಿತಿ

Sampriya

ಶನಿವಾರ, 26 ಏಪ್ರಿಲ್ 2025 (18:16 IST)
ಬೆಂಗಳೂರು: ಚಿನ್ನ ಖರೀದಿಸಿ ವಂಚಿಸಿದ ಆರೋಪ ಸಂಬಂಧ ಸುದ್ದಿಯಾಗಿದ್ದ ಐಶ್ವರ್ಯಾ ಗೌಡ ಮನೆ ಮೇಲೆ ಇಡಿ ಅಧಿಕಾರಿಗಳು ದಾಳಿ ನಡೆಸಿದ್ದು, ಇದೀಗ  ಸುಮಾರು  ₹2.25 ಕೋಟಿ ಹಣ ದೊರೆತಿದೆ.

ಈ ಬಗ್ಗೆ ಪ್ರಶ್ನಿಸಿದಕ್ಕೆ ಸೂಕ್ತ ಸಮಜಾಯಿಷಿ ನೀಡದ ಕಾರಣ ಅವರನ್ನು ಬಂಧಿಸಲಾಗಿದೆ. ಹೀಗಾಗಿ, ಐಶ್ವರ್ಯಾ ಗೌಡರನ್ನು ನಗರದ ವಿಶೇಷ ನ್ಯಾಯಾಲಯಕ್ಕೆ ಹಾಜರುಪಡಿಸಿ, 14 ದಿನಗಳ ಕಾಲ ಕಸ್ಟಡಿಗೆ ಪಡೆದುಕೊಳ್ಳಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಇಡಿ ಅಧಿಕಾರಿಗಳು ಮಾಜಿ ಸಚಿವ ವಿನಯ್ ಕುಲಕರ್ಣಿ ಮನೆ ಮೇಲು ದಾಳಿ ನಡೆಸಿದ್ದು, ಕಳೆದ ಒಂದು ತಿಂಗಳಿನಿಂದ ಇಡಿ ಅಧಿಕಾರಿಗಳು ತಮಗೆ ಕಿರುಕುಳ ನೀಡುತ್ತಿದ್ದಾರೆ ಎಂದು ವರದಿಗಾರರಿಗೆ ತಿಳಿಸಿದ್ದಾರೆ.

"ಒಬ್ಬ ವ್ಯಕ್ತಿಗೆ ತೊಂದರೆ ಕೊಡುವುದಕ್ಕೆ ಒಂದು ಮಿತಿ ಇರಬೇಕು. ಜನ ತಮ್ಮಲ್ಲಿರುವ ಅಧಿಕಾರವನ್ನು ದುರುಪಯೋಗಪಡಿಸಿಕೊಳ್ಳುವುದನ್ನು ನೋಡಿದ್ರೆ ತುಂಬಾ ನೋವಾಗುತ್ತದೆ. ಅವರು ನನ್ನನ್ನು ರಾಜಕೀಯವಾಗಿ ಮುಗಿಸಲು ಮತ್ತು ಜನರಿಂದ ನನ್ನನ್ನು ದೂರವಿಡಲು ಬಯಸುತ್ತಾರೆ" ಎಂದು ಹೇಳಿದ್ದರು.

ಐಶ್ವರ್ಯ ಗೌಡ ಅವರು ಸುಮಾರು 9 ಕೋಟಿ ರೂ. ಮೌಲ್ಯದ ಚಿನ್ನ ಖರೀದಿಸಿ ವಂಚಿಸಿದ ಆರೋಪ ಎದುರಿಸುತ್ತಿದ್ದಾರೆ.

ವಾರಾಹಿ ವರ್ಲ್ಡ್‌ ಆಫ್‌ ಗೋಲ್ಡ್‌ ಜುವೆಲ್ಲರಿಯ ಮಾಲೀಕರಿಗೆ ಐಶ್ವರ್ಯ ಗೌಡ ವಂಚಿಸಿದ್ದಾರೆ ಎಂಬ ಆರೋಪವಿದೆ.

ಅದಲ್ಲದೆ ಮಾಜಿ ಸಂಸದ ಡಿಕೆ ಸುರೇಶ್ ಹೆಸರಿನಲ್ಲಿ ವಂಚನೆ ಎಸಗಿದ್ದರು ಎನ್ನಲಾಗಿದೆ. ಈ ವಿಚಾರವಾಗಿ ಬೆಂಗಳೂರು ನಗರ ಪೊಲೀಸ್ ಆಯುಕ್ತರಿಗೆ 2024ರ ಡಿಸೆಂಬರ್​​ನಲ್ಲೇ ಡಿಕೆ ಸುರೇಶ್ ದೂರು ನೀಡಿದ್ದರು.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ