ಚಿನ್ನದ ಬೆಲೆ 430 ರೂ. ಕುಸಿತ..!

ಮಂಗಳವಾರ, 9 ಆಗಸ್ಟ್ 2022 (14:06 IST)
ಭಾರತದಲ್ಲಿ  ಚಿನ್ನದ ಬೆಲೆ ಏರಿಕೆಯಾಗಿತ್ತು. ಆದರೆ, ಇಂದು ಚಿನ್ನದ ದರ 430 ರೂ. ಇಳಿಕೆಯಾಗಿದೆ. ಬೆಳ್ಳಿಯ ಬೆಲೆ ಇಂದು 800 ರೂ. ಕುಸಿತವಾಗಿದೆ. ನಿನ್ನೆ 22 ಕ್ಯಾರೆಟ್ ಚಿನ್ನದ ಬೆಲೆ 47,650 ರೂ. ಇದ್ದುದು 47,250 ರೂ. ಆಗಿದೆ. ಹಾಗೇ, 24 ಕ್ಯಾರೆಟ್ ಚಿನ್ನದ ಬೆಲೆ 51,980 ರೂ. ಇದ್ದುದು 51,550 ರೂ. ಆಗಿದೆ. 
ಚಿನ್ನದ ಬೆಲೆ ಏರಿಳಿತದ ವಿಚಾರದಲ್ಲಿ ಅಂತಾರಾಷ್ಟ್ರೀಯ ಟ್ರೆಂಡ್, ಚಿನ್ನದ ಮೇಲಿನ ಆಮದು ಸುಂಕ ಮತ್ತು ಡಾಲರ್ ಎದುರು ರೂ. ಮೌಲ್ಯ ನಿರ್ಣಾಯಕವಾಗುತ್ತದೆ. ಇಂದಿನ ಬೆಳ್ಳಿಯ ದರ 800 ರೂ. ಇಳಿಕೆಯಾಗಿದೆ. ಭಾರತದಲ್ಲಿ ನಿನ್ನೆ 1 ಕೆಜಿ ಬೆಳ್ಳಿ ಬೆಲೆ 58,200 ರೂ. ಇದ್ದುದು ಇಂದು 57,400 ರೂ. ಆಗಿದೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ