ರಾಜ್ಯದಲ್ಲೂ ಮಾಸ್ಕ್​ಗೆ ಶೀಘ್ರ ಗುಡ್​ ಬೈ

ಬುಧವಾರ, 6 ಏಪ್ರಿಲ್ 2022 (19:54 IST)
ಸುಮಾರು 2 ವರ್ಷಗಳ ಬಳಿಕ ರಾಜ್ಯದಲ್ಲಿ ಮಾಸ್ಕ್​ಗೆ ಗುಡ್​ ಬೈ ಹೇಳುವ ಕಾಲ ಸನ್ನಿಹಿತವಾಗಿದೆ. ಆರೋಗ್ಯ ಸಚಿವ ಡಾ.ಕೆ.ಸುಧಾಕರ್​ ಈ ಬಗ್ಗೆ ಸುಳಿವು ನೀಡಿದ್ದಾರೆ. ಕೋವಿಡ್​ ತಾಂತ್ರಿಕ ಸಲಹಾ ಸಮಿತಿಯ ಸಲಹೆ ಪಡೆದು, ಮುಖ್ಯಮಂತ್ರಿಗಳೊಂದಿಗೆ ಚರ್ಚಿಸಿ, ಮಾಸ್ಕ್​ ಕಡ್ಡಾಯ  ನಿಯಮ ರದ್ದುಗೊಳಿಸುವಬಗ್ಗೆ ನಿರ್ಧರಿಸಲಾಗುವುದು ಎಂದು ಸಚಿವರು ತಿಳಿಸಿದ್ದಾರೆ. ರಾಜ್ಯ ಮತ್ತು ದೇಶದಲ್ಲಿ ಕೊವಿಡ್​ ಸೋಕು ಭಾರಿ ಇಳಿಕೆಯಾಗಿದೆ.ಜತೆಗೆ ರಾಜ್ಯದಲ್ಲಿ ಸಾವಿನ ಸಂಖ್ಯೆ ಸತತವಾಗಿ ಶೂನ್ಯ ದಾಖಲಾಗುತ್ತಿದೆ. ಅಲ್ಲದೆ ಕೇಂದ್ರ ಸರ್ಕಾರದ ಸೂಚನೆ ಮೇರೆಗೆ ದಿಲ್ಲಿ, ಮಹಾರಾಷ್ಟ್ರ ಸೇರಿದಂತೆ ಹಲವು ರಾಜ್ಯಗಳು ಈಗಾಗಲೇ ಎಲ್ಲಾ ಕೊವಿಡ್​ ನಿರ್ಭಂಧಗಳು ಮತ್ತು ಮಾಸ್ಕ್​ ಕಡ್ಡಾಯ ನಿಯಮವನ್ನು ರದ್ದುಗೊಳಿಸಿವೆ. ಈ ಹಿನ್ನೆಲೆ ರಾಜ್ಯ ಸರ್ಕಾರವೂ ಕ್ರಮ ಕೈಗೊಳ್ಳಲು ಮುಂದಾಗಿದೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ