ಕೇಂದ್ರದಿಂದ ಮಹತ್ವದ ಸಂದೇಶ ತಂದ ಬಿಜೆಪಿ?

ಶನಿವಾರ, 1 ಅಕ್ಟೋಬರ್ 2016 (20:02 IST)
ಮಾಜಿ ಪ್ರಧಾನಿ ದೇವೇಗೌಡರು ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ಸ್ಥಳಕ್ಕೆ ಬಿಜೆಪಿ ನಾಯಕರು ದೌಡಾಯಿಸಿದ್ದು, ಕೇಂದ್ರದಿಂದ ಮಹತ್ವದ ಸಂದೇಶ ತಂದಿರುವ ನಿರೀಕ್ಷೆ ವ್ಯಕ್ತವಾಗುತ್ತಿದೆ.
 
ಕಾವೇರಿ ನಿರ್ವಹಣಾ ಮಂಡಳಿ ರಚನೆ ವಿರೋಧಿಸಿ ಜೆಡಿಎಸ್ ವರಿಷ್ಠ ಹಾಗೂ ಮಾಜಿ ಪ್ರಧಾನಿ ಎಚ್‌.ಡಿ.ದೇವೇಗೌಡರು ವಿಧಾನಸೌಧದ ಎದುರು ಅಹೋರಾತ್ರಿ ಉಪವಾಸ ಸತ್ಯಾಗ್ರಹ ಕೈಗೊಂಡಿದ್ದು, ಉಪವಾಸ ಸತ್ಯಾಗ್ರಹ ಕೈಬಿಡುವಂತೆ ಬಿಜೆಪಿ ನಾಯಕರು ಒತ್ತಾಯ ನಡೆಸಿದ್ದಾರೆ.
 
ಕಾವೇರಿ ವಿವಾದಕ್ಕೆ ಸಂಬಂಧಿಸಿದಂತೆ ಕೇಂದ್ರ ಸಚಿವ ಅನಂತ್ ಕುಮಾರ್ ಅವರು ದೇವೇಗೌಡರ ಜೊತೆ ಸಮಾಲೋಚನೆ ನಡೆಸುತ್ತಿದ್ದು, ಕೇಂದ್ರದಿಂದ ಮಹತ್ವದ ಸಂದೇಶ ತಂದಿದ್ದಾರೆ ಎನ್ನುವ ಸಂಶಯ ವ್ಯಕ್ತವಾಗುತ್ತಿದೆ. 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ವೆಬ್ದುನಿಯಾವನ್ನು ಓದಿ