ಅನ್ನಭಾಗ್ಯ ಯೋಜನೆ ಫಲಾನುಭವಿಗಳಿಗೆ ಸರ್ಕಾರದಿಂದ ಗುಡ್ ನ್ಯೂಸ್

Krishnaveni K

ಗುರುವಾರ, 11 ಸೆಪ್ಟಂಬರ್ 2025 (10:45 IST)
ಬೆಂಗಳೂರು: ಅನ್ನಭಾಗ್ಯ ಯೋಜನೆಯ ಫಲಾನುಭವಿಗಳಿಗೆ ಸರ್ಕಾರದಿಂದ ಗುಡ್ ನ್ಯೂಸ್ ಸಿಕ್ಕಿದೆ. ಅನ್ನಭಾಗ್ಯ ಫಲಾನುಭವಿಗಳಿಗೆ ಸಿಎಂ ಸಿದ್ದರಾಮಯ್ಯ ಸಿಹಿ ಸುದ್ದಿಯೊಂದನ್ನು ನೀಡಿದ್ದಾರೆ.

ಇದುವರೆಗೆ ಅನ್ನಭಾಗ್ಯ ಯೋಜನೆಯಡಿ ಅಕ್ಕಿ ಮಾತ್ರ ಸಿಗುತ್ತಿತ್ತು. ಆದರೆ ಇನ್ನು ಮುಂದೆ ಅಕ್ಕಿ ಜೊತೆಗೆ ಆಹಾರ ಕಿಟ್ ನ್ನೂ ಪೂರೈಕೆ ಮಾಡುವ ಬಗ್ಗೆ ಪ್ರಸ್ತಾವನೆ ಸಲ್ಲಿಸಲು ಸಿಎಂ ಸಿದ್ದರಾಮಯ್ಯ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

ಈ ಆಹಾರ ಕಿಟ್ ನಲ್ಲಿ ಪೌಷ್ಠಿಕ ಧಾನ್ಯ, ಎಣ್ಣೆ, ಸಕ್ಕರೆಯಂತಹ ಅಗತ್ಯ ವಸ್ತುಗಳನ್ನು ಒದಗಿಸಲು ಸಿಎಂ ಸಿದ್ದರಾಮಯ್ಯ ಸೂಚನೆ ನೀಡಿದ್ದಾರೆ. ಗೃಹ ಕಚೇರಿ ಕೃಷ್ಣಾದಲ್ಲಿ ಅಧಿಕಾರಿಗಳೊಂದಿಗೆ ನಡೆಸಿದ ಸಭೆಯಲ್ಲಿ ಈ ಸೂಚನೆ ನೀಡಿದ್ದಾರೆ.

ಈ ಹಿಂದೆ ಇದೇ ರೀತಿ 10 ಕೆಜಿ ಅಕ್ಕಿ ಬದಲು 5 ಕೆಜಿ ಅಕ್ಕಿ ಮತ್ತು ಉಳಿದ 5 ಕೆಜಿ ಬಾಬ್ತು ಸಕ್ಕರೆ, ಎಣ್ಣೆಯಂತಹ ಆಹಾರ ಪದಾರ್ಥಗಳನ್ನು ನೀಡಬೇಕು ಎನ್ನುವ ಪ್ರಸ್ತಾಪ ಬಂದಿತ್ತು. ಆದರೆ ನಂತರ ಈ ಯೋಜನೆ ಅರ್ಧಕ್ಕೇ ನಿಂತಿತ್ತು. ಈಗ ಮತ್ತೆ ಸಿಎಂ ಸಿದ್ದರಾಮಯ್ಯ ಆ ಯೋಜನೆ ಕಾರ್ಯರೂಪಕ್ಕೆ ತರಲು ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ