ಭಕ್ತಾಧಿಗಳಿಗೆ ಸಿಹಿ ಸುದ್ದಿ : ಕಾಶಿ ಯಾತ್ರೆಗೆ ಮುಜರಾಯಿ ಇಲಾಖೆಯಿಂದ ವಿಶೇಷ ರೈಲು

ಸೋಮವಾರ, 31 ಜುಲೈ 2023 (10:04 IST)
ಬೆಂಗಳೂರು : ರಾಜ್ಯದ ಮುಜರಾಯಿ ಇಲಾಖೆಯಿಂದ ಕಾಶಿ ಯಾತ್ರೆಗೆ ವಿಶೇಷ ರೈಲು ವ್ಯವಸ್ಥೆ ಮಾಡಲಾಗಿದೆ. ಕರ್ನಾಟಕ ಭಾರತ್ ಗೌರವ್ ಕಾಶಿಯಾತ್ರೆಯ ನಾಲ್ಕನೇ ರೈಲಿಗೆ ಮುಜರಾಯಿ ಸಚಿವ ರಾಮಲಿಂಗಾರೆಡ್ಡಿ ಚಾಲನೆ ನೀಡಿದ್ದಾರೆ.

ಯಶವಂತಪುರ ರೈಲ್ವೆ ನಿಲ್ದಾಣದಿಂದ ಹೊರಟಿರುವ ಕರ್ನಾಟಕ ಭಾರತ್ ಗೌರವ್ ಕಾಶಿಯಾತ್ರೆ ರೈಲು ವಾರಣಾಸಿ, ಅಯೋಧ್ಯೆ, ಪ್ರಯಾಗ್ ರಾಜ್ ದರ್ಶನ ಮಾಡಲಿರುವ ಯಾತ್ರ್ರಿಗಳನ್ನು ಕರೆದೊಯ್ಯಲಿದೆ. ಒಟ್ಟು 8 ದಿನಗಳ ಕಾಶಿ ಪ್ರವಾಸಕ್ಕೆ ಒಬ್ಬರಿಗೆ 20 ಸಾವಿರ ರೂ. ದರ ನಿಗದಿ ಮಾಡಲಾಗಿದೆ.

ಇದರಲ್ಲಿ ಸಬ್ಸಿಡಿ 5 ಸಾವಿರ ರೂ. ಸರ್ಕಾರದಿಂದ ಸಿಗಲಿದೆ. ಅಂದರೆ ಒಬ್ಬರಿಗೆ 15 ಸಾವಿರ ರೂ. ಖರ್ಚು ಪ್ರಯಾಣಿಕರಿಗೆ ಬರಲಿದೆ. ಊಟ, ವಸತಿ ವ್ಯವಸ್ಥೆ ಸಹ ಇರಲಿದೆ. 700 ಸೀಟ್ ಸಾಮಥ್ರ್ಯ ಹೊಂದಿರುವ ರೈಲಿನಲ್ಲಿ ಸದ್ಯ 403 ಸೀಟ್ ಬುಕ್ಕಿಂಗ್ ಆಗಿವೆ. 

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ