ಹಳ್ಳಿಗಳಲ್ಲಿ ಮನೆಮನೆಗೂ ತೆರಳಿ ಕೃಷಿ ಮತ್ತು ಪಶು ವಲಯಕ್ಕೆ ಸಂಬಂಧಿಸಿದಂತೆ ಕೃಷಿ ಇಲಾಖೆ, ತೋಟಗಾರಿಕೆ ಇಲಾಖೆ, ಪಶು ಸಂಗೋಪನಾ ಇಲಾಖೆಯಿಂದ ಜಾರಿಗೊಳಿಸಲಾಗುವ ಯೋಜನೆಗಳು, ಅವುಗಳನ್ನು ಸದುಪಯೋಗ ಮಾಡಿಕೊಳ್ಳುವ ಕುರಿತು ಸಲಹೆಗಳನ್ನು ನೀಡಲು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಒಂದು ಗ್ರಾಮ ಪಂಚಾಯಿತಿಗೆ ಒಬ್ಬ ಕೃಷಿ ಸಖಿಯರಂತೆ ನೇಮಿಸಲಾಗಿದೆ.
ಕೃಷಿ ಜೀವನೋಪಾಯ ಸಮುದಾಯ ಸಂಪನ್ಮೂಲ ವ್ಯಕ್ತಿಗಳಾದ 30 ಕೃಷಿ ಸಖಿಯರಿಗೆ ಮೊದಲನೇ ಬ್ಯಾಚ್‌ನ 6 ದಿನಗಳ ತರಬೇತಿ ಕಾರ್ಯಾಗಾರವನ್ನು ಉದ್ಘಾಟಿಸಿ ಮಾತನಾಡಿದ ಜಿಪಂ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಕೆ.ರೇವಣಪ್ಪ, ಸಂಜೀವಿನಿ ತರಬೇತಿ ಶಿಬಿರವು ಸಖಿಯರ ಸಾಮರ್ಥ್ಯ ಅಭಿವೃದ್ಧಿಗೆ ಪೂರಕವಾಗಿದೆ ಎಂದು ಹೇಳಿದರು.