ರೈತರಿಗೆ ಗುಡ್​ನ್ಯೂಸ್: ಆಗಸ್ಟ್ ಮೊದಲ ವಾರದಲ್ಲಿ ಕಾಲುವೆಗೆ ಭದ್ರೆ ಹರಿವು

ಸೋಮವಾರ, 31 ಜುಲೈ 2023 (12:21 IST)
ದಾವಣಗೆರೆ : ಭಾರೀ ಮಳೆಯಿಂದಾಗಿ ಶಿವಮೊಗ್ಗದ ಭದ್ರಾ ನದಿ ಭರ್ತಿಯಾಗಿದ್ದು, ಇದೇ ಆಗಸ್ಟ್ ಮೊದಲ ವಾರದಲ್ಲಿ ಕಾಲೆವೆಗಳಿಗೆ ನೀರು ಹರಿಸಲು ತೀರ್ಮಾನಿಸಲಾಗಿದೆ.
 
ಈ ಬಗ್ಗೆ ಸಚಿವ ಎಸ್ ಎಸ್ ಮಲ್ಲಿಕಾರ್ಜುನ ಮಾಹಿತಿ ನೀಡಿದ್ದಾರೆ. ಈ ಬಗ್ಗೆ ಇಂದು (ಜುಲೈ 31) ದಾವಣಗೆರೆಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಭದ್ರಾ ಡ್ಯಾಂನಿಂದ ದಾವಣಗೆರೆ ಜಿಲ್ಲೆಯ ಭದ್ರಾ ಕಾಲುವೆಗೆ ನೀರು ನೀಡುವ ಬಗ್ಗೆ ಇಷ್ಟರಲ್ಲಿ ಭದ್ರಾ ನೀರಾವರಿ ಸಲಹಾ ಸಮಿತಿ ಸಭೆ ನಡೆಯಲಿದೆ.

ಈ ಸಭೆಯಲ್ಲಿ ಕಾಲುವೆಗೆ ನೀರು ಬಿಡುವ ಬಗ್ಗೆ ಅಧಿಕೃತ ನಿರ್ಧಾರ ತೆಗೆದುಕೊಳ್ಳಲಾಗುವುದು ಎಂದರು. ಈಗಾಗಲೇ ಭದ್ರಾ ಡ್ಯಾಂನಲ್ಲಿ 162 ಅಡಿ ನೀರು ಇದೆ. ಈಗ ದಾವಣಗೆರೆ ಜಿಲ್ಲೆಯಲ್ಲಿ ಬಹುತೇಕ ಕಡೆ ಭತ್ತದ ನಾಟಿ ಮಾಡಲಾಗುತ್ತಿದೆ. ಆದಷ್ಟು ಬೇಗ ಭದ್ರ ಕಾಲುವೆಗೆ ನೀರು ಬಿಡಲಾಗುವುದು ಎಂದು ದಾವಣಗೆರೆ. ಜಿಲ್ಲಾ ಉಸ್ತುವಾರಿ ಸಚಿವ ಎಸ್ ಎಸ್ ಮಲ್ಲಿಕಾರ್ಜುನ ತಿಳಿಸಿದರು.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ