ಸರ್ಕಾರಿ ಶಾಲಾ ಶಿಕ್ಷಕರಿಗೆ ಗುಡ್ ನ್ಯೂಸ್
ಕರ್ನಾಟಕ ಆಡಳಿತಾತ್ಮಕ ನ್ಯಾಯ ಮಂಡಳಿ ಶಾಲಾ ಶಿಕ್ಷಕರ ವರ್ಗಾವಣೆಗೆ ನೀಡಿದ್ದ ತಡೆಯಾಜ್ಞೆ ತೆರವುಗೊಳಿಸಿದ್ದು, ಶೀಘ್ರವೇ ವರ್ಗಾವಣೆ ಪ್ರಕ್ರಿಯೆ ಆರಂಭವಾಗಲಿದೆ ಎಂದು ತಿಳಿಸಿದೆ. ಇದಕ್ಕೆ ಸಂಬಂಧಿಸಿದಂತೆ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಕುರಿತು ಮಾಹಿತಿ ನೀಡಿದ್ದು, ವರ್ಗಾವಣೆ ತಡೆ ತೆರವಾಗಿದ್ದು, ವೇಳಾಪಟ್ಟಿಯನ್ನು ಶೀಘ್ರವೇ ಬಿಡುಗಡೆಯಾಗಲಿದೆ ಎಂದಿದ್ದಾರೆ.ಇನ್ನು ವರ್ಗಾವಣೆಗೆ ಸಂಬಂಧಿಸಿದಂತೆ ಕೌನ್ಸೆಲಿಂಗ್ ನಡೆಯಲಿದೆ. ಇನ್ನು ಸೆಪ್ಟೆಂಬರ್ 8 ರಂದು 2020-21 ನೇ ಸಾಲಿನ ಶಿಕ್ಷಕರ ವರ್ಗಾವಣೆಗೆ ತಡೆ ನೀಡಿದ್ದರಿಂದ ವರ್ಗಾವಣೆಗೆ ಪ್ರಕ್ರಿಯೆ ಸ್ಥಗಿತವಾಗಿತ್ತು. ಹಾಗೆ ಹೆಚ್ಚುವರಿ ವರ್ಗಾವಣೆ ಶಿಕ್ಷೆಗೆ ಗುರಿಯಾಗಿರುವ ಶಿಕ್ಷಕರು ಮತ್ತೊಮ್ಮೆ ವರ್ಗ ಪಡೆಯಲು ಅವಕಾಶ ನೀಡಬೇಕೆಂದು ಕೆಲವು ಶಿಕ್ಷಕ ವೃಂದ ಕೆಎಟಿಗೆ ಮನವಿ ಸಲ್ಲಿಸಿದ್ದು, ಈ ಮನವಿ ಪರಿಗಣಿಸಿ ನ್ಯಾ.ಆರ್.ಬಿ. ಬೋದಿಹಾಳ್ ಹಾಗೂ ಎನ್. ಶಿವಶೈಲಂ ಅವರಿದ್ದ ಪೀಠ ವರ್ಗಾವಣೆ ಪ್ರಕ್ರಿಯೆಗೆ ತಡೆಯಾಜ್ಞೆ ನೀಡಿತ್ತು. ಇದೀಗ ಕೆಇಟಿ ವರ್ಗಾವಣೆ ತಡೆಯಾಜ್ಞೆ ತೆರವುಗೊಂಡಿರುವುದರಿಂದ ಸುಮಾರು 72 ಸಾವಿರ ಶಿಕ್ಷಕರ ವರ್ಗಾವಣೆ ಪ್ರಕ್ರಿಯೆ ಆರಂಭವಾಗಲಿದೆ ಎಂದು ಸಚಿವರು ತಿಳಿಸಿದರು.