ಮನೆ ಯಜಮಾನಿಯರಿಗೆ ಗುಡ್‌ನ್ಯೂಸ್: ಗೃಹಲಕ್ಷ್ಮೀ ಬಗ್ಗೆ ಸ್ಪಷ್ಟನೆ ಕೊಟ್ಟ ಸಚಿವೆ ಹೆಬ್ಬಾಳ್ಕರ್
ಕಾಂಗ್ರೆಸ್‌ನ ಐದು ವರ್ಷದ ಅಧಿಕಾರದ ಅವಧಿಯಲ್ಲಿ ಪ್ರತಿ ತಿಂಗಳು ಗೃಹಲಕ್ಷ್ಮೀ ಹಣ ಪ್ರತಿ ಮಹಿಳೆಯರ ಖಾತೆಗೆ ಜಮೆ ಆಗುತ್ತದೆ. ಯಾರು ಕೂಡ ಆತಂಕಕ್ಕೊಳಗಾಗುವುದು ಬೇಡ. ಕೊಟ್ಟ ಭಾಷೆಯಂತೆ ಪ್ರತಿ ತಿಂಗಳು ತಪ್ಪದೆ ಹಣ ಹಾಕುತ್ತೇವೆ. ಯಾರೂ ಏನೇ ಮಾತನಾಡಿದರೂ, ಬಿಜೆಪಿಯವರು ಹೇಳಿದರೂ ಕಿವಿಗೋಡಬೇಡಿ. ಐದು ವರ್ಷ ಕೂಡ ಗೃಹಲಕ್ಷ್ಮಿ ಮನೆ ಮನೆ ಬಾಗಿಲಿಗೆ ಹೋಗುತ್ತಾಳೆ ಎಂದು ಭರವಸೆ ನೀಡಿದರು.