ವಲಸೆ ಹೋದ, ಗ್ರಾಮೀಣ ಭಾಗದ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್

ಸೋಮವಾರ, 23 ಆಗಸ್ಟ್ 2021 (09:03 IST)
ಬೆಂಗಳೂರು : ಗ್ರಾಮೀಣಾ ಭಾಗದ ವಿದ್ಯಾರ್ಥಿಗಳಿಗೆ ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಅವರು ಸಿಹಿಸುದ್ದಿ ನೀಡಿದ್ದು, ವಲಸೆ ಹೋದ ,ಗ್ರಾಮೀಣ ಭಾಗದ ವಿದ್ಯಾರ್ಥಿಗಳು ಶಾಲೆಗೆ ದಾಖಲಾಗದಿದ್ದರೂ ಹತ್ತಿರದ ಶಾಲೆಗಳಲ್ಲಿ ಪಾಠ ಕೇಳಬಹುದು ಎಂದು ಹೇಳಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು, ವಲಸೆ ಹೋದ ಹಾಗೂ ಗ್ರಾಮೀಣ ಭಾಗದ ವಿದ್ಯಾರ್ಥಿಗಳು ಶಾಲೆಗೆ ದಾಖಲಾಗದಿದ್ದರೂ ಹತ್ತಿರದ ಯಾವುದೇ ಶಾಲೆಗೆ ಹೋಗಿ ಪಾಠ ಕೇಳಬಹುದು. ಬಳಿಕ ಆ ಶಾಲೆಯಲ್ಲೇ ದಾಖಲಾತಿ ಪಡೆಯಲು ವಿದ್ಯಾರ್ಥಿಗಳಿಗೆ ಅವಕಾಶ ನೀಡಲಾಗುವುದು ಎಂದು ತಿಳಿಸಿದ್ದಾರೆ.
ಇನ್ನು ಇಂದಿನಿಂದ ರಾಜ್ಯದ 5 ಜಿಲ್ಲೆಗಳನ್ನು ಹೊರತುಪಡಿಸಿ ರಾಜ್ಯಾದ್ಯಂತ 9 ರಿಂದ 12 ನೇ ತರಗತಿಗಳು ಆರಂಭವಾಗುತ್ತಿದ್ದು, ವಲಸೆ ಹೋಗಿರುವ ವಿದ್ಯಾರ್ಥಿಗಳು ಮತ್ತು ಗ್ರಾಮೀಣಾ ಭಾಗದ ವಿದ್ಯಾರ್ಥಿಗಳು ಹತ್ತಿರದ ಶಾಲೆಗಳಲ್ಲೇ ಪಾಠ ಕೇಳಲು ಅವಕಾಶ ನೀಡಲಾಗಿದೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ