ಪತ್ರಕರ್ತರಿಗೆ ಗುಡ್ ನ್ಯೂಸ್: ಮಾ.31ರವರೆಗೆ 'KSRTC ಸ್ಮಾರ್ಟ್ ಕಾರ್ಡ್' ಅವಧಿ ವಿಸ್ತರಣೆ

ಸೋಮವಾರ, 28 ಫೆಬ್ರವರಿ 2022 (21:00 IST)
ಮಾನ್ಯತೆ ಪಡೆದ ಪತ್ರಕರ್ತರಿಗೆ  ವಿತರಿಸಿರುವಂತ ಸ್ಮಾರ್ಟ್ ಕಾರ್ಡ್ ಮಾನ್ಯತಾ ಅವಧಿಯನ್ನು ದಿನಾಂಕ 31-03-2022ವರೆಗೆ ವಿಸ್ತರಿಸಲಾಗಿದೆ. ಈ ಮೂಲಕ ಪತ್ರಕರ್ತರಿಗೆ ಗುಡ್ ನ್ಯೂಸ್ ನೀಡಲಾಗಿದೆ.
ಈ ಕುರಿತಂತೆ ಕೆ ಎಸ್ ಆರ್ ಟಿಯ ಮುಖ್ಯ ಸಂಚಾರಿ ವ್ಯವಸ್ಥಾಪಕರು ಎಲ್ಲಾ ನಿಗಮಕ್ಕೆ ಪತ್ರ ಬರೆದಿದ್ದು, ಮಾನ್ಯತೆ ಪಡೆದ ಪತ್ರಕರ್ತರಿಗೆ ವಿತರಿಸಲಾಗಿರುವ ಸ್ಮಾರ್ಟ್ ಕಾರ್ಡ್ ನ ಅವಧಿಯು ದಿನಾಂಕ 28-02-2022ರ ಇಂದು ಕೊನೆಗೊಳ್ಳುತ್ತಿದೆ. ಈ ಸ್ಮಾರ್ಟ್ ಕಾರ್ಡ್ ಅವಧಿ ವಿಸ್ತರಿಸುವಂತೆ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯು ಕೋರಿರುತ್ತದೆ.
ಈ ಹಿನ್ನಲೆಯಲ್ಲಿ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯಿಂದ ಮಾನ್ಯತೆ ಕಾರ್ಡ್ ಪಡೆದ ಪತ್ರಕರ್ತರಿಗೆ ಕೆ ಎಸ್ ಆರ್ ಟಿಸಿ ವತಿಯಿಂದ ವಿತರಿಸಲಾಗಿರುವ ಸ್ಮಾರ್ಟ್ ಕಾರ್ಡ್ ಬಸ್ ಪಾಸ್ ಗಳನ್ನು ದಿನಾಂಕ 31-03-2022ರವರೆಗೆ ಅನುಮತಿಸಲು ಅನುಮೋದಿಸಲಾಗಿರುತ್ತದೆ. ದಿನಾಂಕ 31-12-2021ರವರೆಗೆ ಚಾಲ್ತಿಯಲ್ಲಿರುವ ಸ್ಮಾರ್ಟ್ ಕಾರ್ಡ್ ಬಸ್ ಪಾಸ್ ಗಳನ್ನು ಹೊಂದಿರುವ ಪತ್ರಕರ್ತರುಗಳನ್ನು ದಿನಾಂಕ 31-03-2022ರವರೆಗೆ ಕೆ ಎಸ್ ಆರ್ ಟಿ ಸಿ ನಿಗಮದ ಬಸ್ಸುಗಳಲ್ಲಿ ಪ್ರಯಾಣಿಸಲು ಅನುಮತಿಸುವಂತೆ ಸೂಚಿಸಿದ್ದಾರೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ