Karnataka:ವೈದ್ಯಕೀಯ ಕೋರ್ಸ್ ಕಲಿಯುವವರಿಗೆ ಗುಡ್ ನ್ಯೂಸ್ ಕೊಟ್ಟ ಸರ್ಕಾರ

Krishnaveni K

ಶುಕ್ರವಾರ, 16 ಮೇ 2025 (10:04 IST)
ಬೆಂಗಳೂರು: ವೈದ್ಯಕೀಯ ಕೋರ್ಸ್ ಕಲಿಯಲು ಸಿದ್ಧತೆ ಮಾಡಿಕೊಂಡಿರುವ ವಿದ್ಯಾರ್ಥಿಗಳಿಗೆ ವೈದ್ಯಕೀಯ ಶಿಕ್ಷಣ ಸಚಿವ ಡಾ. ಶರಣ್ ಪ್ರಕಾಶ್ ಪಾಟೀಲ್ ಗುಡ್ ನ್ಯೂಸ್ ನೀಡಿದ್ದಾರೆ.

ಈ ಬಾರಿ ವೈದ್ಯಕೀಯ ಶಿಕ್ಷಣ ಶುಲ್ಕ ಹೆಚ್ಚಳ ಮಾಡಲ್ಲ ಎಂದು ಸಚಿವರು ಘೋಷಣೆ ಮಾಡಿದ್ದಾರೆ. ಈ ವರ್ಷ ಶೇ. 15 ರಷ್ಟು ಶುಲ್ಕ ಹೆಚ್ಚಳ ಮಾಡುವಂತೆ ಖಾಸಗಿ ವೈದ್ಯಕೀಯ ಕಾಲೇಜುಗಳ ಆಡಳಿತ ಮಂಡಳಿ ಪ್ರಸ್ತಾವನೆ ಇಟ್ಟಿತ್ತು.

ಈ ಬಗ್ಗೆ ಡಾ. ಶರಣ್ ಪ್ರಕಾಶ್ ಪಾಟೀಲ್ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಚರ್ಚೆ ನಡೆಸಲಾಗಿದೆ. ಬಳಿಕ ಈ ವರ್ಷ ಶುಲ್ಕ ಹೆಚ್ಚಳ ಮಾಡುವುದು ಬೇಡ ಎಂದು ತೀರ್ಮಾನಿಸಲಾಗಿದೆ.

ಈ ಬಾರಿ ಇಂಜಿನಿಯರಿಂಗ್ ಶುಲ್ಕ ಹೆಚ್ಚಳ ಮಾಡಲಾಗಿತ್ತು. ಇದರ ಬೆನ್ನಲ್ಲೇ ವೈದ್ಯಕೀಯ ಕೋರ್ಸ್ ಶುಲ್ಕ ಹೆಚ್ಚಳಕ್ಕೂ ಮನವಿ ಮಾಡಲಾಗಿತ್ತು. ನೀಟ್ ಪರೀಕ್ಷೆ ಮುಕ್ತಾಯವಾಗಿದ್ದು ಫಲಿತಾಂಶ ಬರಬೇಕಿದೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ