ಮಲೆಮಹದೇಶ್ವರ ಭಕ್ತರಿಗೆ ಗುಡ್ ನ್ಯೂಸ್!

ಶುಕ್ರವಾರ, 12 ಆಗಸ್ಟ್ 2022 (09:02 IST)
ಚಾಮರಾಜನಗರ : ಮಾದಪ್ಪನ ದರ್ಶನ ಪಡೆಯಲು ಪ್ರತಿನಿತ್ಯ ಸಾವಿರಾರು ಸಂಖ್ಯೆಯಲ್ಲಿ ಭಕ್ತರು ಮಲೆಮಹದೇಶ್ವರ ಬೆಟ್ಟಕ್ಕೆ ಆಗಮಿಸುತ್ತಾರೆ.

ದಟ್ಟಾರಣ್ಯದಲ್ಲಿ ಕಲ್ಲುಮುಳ್ಳಿನ ಹಾದಿ ನಡುವೆಯೂ ಮಹದೇಶ್ವರನ ದರ್ಶನ ಮಾಡುತ್ತಾರೆ. ಇದನ್ನರಿತ ಅಭಿವೃದ್ಧಿ ಪ್ರಾಧಿಕಾರ ಭಕ್ತರಿಗೆ ಗುಡ್ ನ್ಯೂಸ್ವೊಂದನ್ನು ನೀಡುತ್ತಿದೆ.

ಹೌದು ರಾಜ್ಯದಲ್ಲಿರುವ ದೇಗುಲಗಳಲ್ಲಿ ಅತೀ ಹೆಚ್ಚು ಆದಾಯ ಬರುವ ಎರಡನೇ ದೇವಾಲಯ ಎಂದರೆ ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನಲ್ಲಿರುವ ಮಲೆ ಮಹದೇಶ್ವರ ದೇವಸ್ಥಾನ.

ಇಲ್ಲಿಗೆ ಪ್ರತಿನಿತ್ಯ ಸಾವಿರಾರು ಭಕ್ತರು ಭೇಟಿ ನೀಡಿ ಮಾದಪ್ಪನ ದರ್ಶನ ಪಡೆದು ಧನ್ಯರಾಗುತ್ತಾರೆ. ಅದರಲ್ಲೂ ದೀಪಾವಳಿ, ಶಿವರಾತ್ರಿ ಹಬ್ಬದ ವೇಳೆಯಲ್ಲಿ ಲಕ್ಷಾಂತರ ಭಕ್ತರು ದರ್ಶನಕ್ಕೆ ಆಗಮಿಸುತ್ತಾರೆ. ಈ ಸಮಯದಲ್ಲಿ ಭಕ್ತರು ಹರಕೆ ಮಾಡಿಕೊಂಡು ಮಂಡ್ಯ, ಮೈಸೂರು, ರಾಮನಗರ ಸೇರಿದಂತೆ ಹಲವು ಜಿಲ್ಲೆಗಳಿಂದ ಮಲೆ ಮಹದೇಶ್ವರ ದೇವಸ್ಥಾನಕ್ಕೆ ದಟ್ಟ ಕಾಡಿನ ನಡುವೆ ಕಾಲ್ನಡಿಗೆಯಲ್ಲಿ ಸಾಗುತ್ತಾರೆ.

ಕಾಡಿನ ನಡುವೆ ಕೆಲವು ಕಡೆ ದುರ್ಗಮ ಹಾದಿಗಳಿವೆ. ಈ ಹಾದಿಯಲ್ಲಿ ಭಕ್ತರು ನಡೆಯಲು ಸಾಕಷ್ಟು ಪ್ರಯಾಸ ಪಡುತ್ತಿದ್ದರು. ಇದನ್ನೆಲ್ಲಾ ಗಮನಿಸಿದ ಮಲೆ ಮಹದೇಶ್ವರ ಪ್ರಾಧಿಕಾರದವರು ಕಾಡಿನ ನಡುವೆ ದುರ್ಗಮ ಹಾದಿ ಇರುವ ಕಡೆ ಮೆಟ್ಟಿಲುಗಳನ್ನು ನಿರ್ಮಾಣ ಮಾಡುವ ಕೆಲಸಕ್ಕೆ ಮುಂದಾಗಿದೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ