Karnataka Weather: ಬಿಸಿಲಿಂದ ಬೇಸತ್ತಿರುವ ಜನರಿಗೆ ಗುಡ್‌ನ್ಯೂಸ್‌: ರಾಜ್ಯಕ್ಕೆ ಪೂರ್ವ ಮುಂಗಾರು ಶೀಘ್ರದಲ್ಲೇ ಆಗಮನ

Sampriya

ಭಾನುವಾರ, 9 ಮಾರ್ಚ್ 2025 (13:30 IST)
Photo Courtesy X
ಬೆಂಗಳೂರು: ದಕ್ಷಿಣ ಕರ್ನಾಟಕದ ಜಿಲ್ಲೆಗಳು ಹಾಗೂ ಕರಾವಳಿ ಜಿಲ್ಲೆಗಳಲ್ಲಿ ಬಿಸಿಲಿಂದ ಬೇಸತ್ತಿರುವ ಜನರಿಗೆ ಗುಡ್‌ನ್ಯೂಸ್‌. ರಾಜ್ಯಕ್ಕೆ ಪೂರ್ವ ಮುಂಗಾರು ಮಳೆ ಸದ್ಯದಲ್ಲೇ ಆಗಮನವಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಒಂದೆರಡು ದಿನಗಳಲ್ಲಿ ರಾಜ್ಯದ ಕರಾವಳಿ ಜಿಲ್ಲೆಗಳು ಹಾಗೂ ದಕ್ಷಿಣ ಕರ್ನಾಟಕದಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಮಾರ್ಚ್ 11 ಹಾಗೂ 12 ರಂದು ಬೆಂಗಳೂರು, ಮೈಸೂರು, ಕೋಲಾರ, ಚಿಕ್ಕಬಳ್ಳಾಪುರ, ರಾಮನಗರ, ಹಾಸನ, ಚಿಕ್ಕಮಗಳೂರು, ಮಂಡ್ಯ, ಶಿವಮೊಗ್ಗ, ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳ ಕೆಲವು ಕಡೆ ಅಲ್ಲಲ್ಲಿ ಹಗುರವಾಗಿ ಮಳೆಯಾಗುವ ಹೆಚ್ಚಿನ ಸಾಧ್ಯತೆ ಇದೆ.

ಬೆಂಗಳೂರಲ್ಲಿ ಈ ವಾರ 33-34 ಡಿಗ್ರಿ ಹಾಗೂ ಕನಿಷ್ಠ ಉಷ್ಣಾಂಶ 20 ಡಿಗ್ರಿ ಸೆಂಟಿಗ್ರೇಡ್ ಇರುವ ಸಾಧ್ಯತೆ ಇದೆ. ಉತ್ತರ ಕರ್ನಾಟಕದ ಜಿಲ್ಲೆಗಳಲ್ಲಿ ಬಿಸಿಲು ಮತ್ತಷ್ಟು ಏರಿಕೆಯಾಗಲಿದೆ. ಉತ್ತರ ಒಳನಾಡಿನಲ್ಲಿ ಇದೇ 9 ರಿಂದ 15 ರವರೆಗೆ ಒಣಹವೆ ಇರಲಿದೆ. ಕಲಬುರಗಿ ಸೇರಿದಂತೆ ಉತ್ತರ ಕರ್ನಾಟಕದಲ್ಲಿ ಗರಿಷ್ಠ ಉಷ್ಣಾಂಶ 37- 38 ಡಿಗ್ರಿ ಸೆಂಟಿಗ್ರೇಡ್ ಇರುವ ಸಾಧ್ಯತೆ ಇದೆ.

ಕಲಬುರಗಿಯಲ್ಲಿ ಗರಿಷ್ಠ 39 ಡಿಗ್ರಿ ಸೆಂಟಿಗ್ರೇಡ್ , ಕೊಪ್ಪಳದಲ್ಲಿ 38 ಡಿಗ್ರಿ ಸೆಂಟಿಗ್ರೇಡ್, ಧಾರವಾಡ, ಗದಗ, ಬಿಜಾಪುರ ಹಾಗೂ ಬಾಗಲಕೋಟೆಯಲ್ಲಿ ಗರಿಷ್ಠ ಉಷ್ಣಾಂಶ 37 ಡಿಗ್ರಿ ಸೆಂಟಿಗ್ರೇಡ್ ದಾಖಲಾಗಿದೆ. ಹಾವೇರಿಯಲ್ಲಿ 37 ಡಿಗ್ರಿ, ಮಂಗಳೂರಲ್ಲಿ 33 ಡಿಗ್ರಿ ಸೆಂಟಿಗ್ರೇಡ್ ದಾಖಲಾಗಿದೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ