ಆಸ್ತಿ ತೆರಿಗೆ ಕಟ್ಟುವವರಿಗೆ Good News
ಆಸ್ತಿ ತೆರಿಗೆ ಕಟ್ಟುವವರಿಗೆ ಮಹಾನಗರ ಪಾಲಿಕೆ ಶುಭ ಸುದ್ದಿ ನೀಡಿದೆ.
ಹೀಗಂತ ಕಲಬುರಗಿ ಮಹಾನಗರ ಪಾಲಿಕೆ ಅಯುಕ್ತರಾದ ರಾಹುಲ್ ಪಾಂಡ್ವೆ ತಿಳಿಸಿದ್ದಾರೆ.
ಪಾವತಿ ವಿಳಂಬದ ದಂಡವನ್ನು ಜುಲೈ 1 ರಿಂದ ಅನ್ವಯಿಸುವ ಬದಲಾಗಿ 2020 ರ ನವೆಂಬರ್ 1 ರಿಂದ ಅನ್ವಯವಾಗುವಂತೆ ದಂಡವನ್ನು ವಿಧಿಸಲಾಗುತ್ತದೆ.
ಕಲಬುರಗಿ ಮಹಾನಗರ ಪಾಲಿಕೆಯ ವ್ಯಾಪ್ತಿಯಲ್ಲಿನ ಆಸ್ತಿಗಳ ಮಾಲೀಕರು, ಅನುಭೋಗದಾರರು ಇದರ ಸದುಪಯೋಗ ಪಡೆದುಕೊಳ್ಳಬೇಕು. ಈ ಅವಕಾಶವು ಕೇವಲ 2020-21ನೇ ಸಾಲಿಗಾಗಿ ಮಾತ್ರ ಅನ್ವಯಿಸುತ್ತದೆ ಎಂದು ಅವರು ಸ್ಪಷ್ಟಪಡಿಸಿದ್ದಾರೆ.