ಎಸ್ಎಸ್ಎಲ್ ಸಿ, ಪಿಯುಸಿ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್: ಪಾಸಿಂಗ್ ಅಂಕದಲ್ಲಿ ಭಾರೀ ಬದಲಾವಣೆ
ಇನ್ನು ಮುಂದೆ ದ್ವಿತೀಯ ಪಿಯುಸಿಯಲ್ಲಿ 600 ಕ್ಕೆ 198 ಅಂಕ ಮತ್ತು ಎಸ್ಎಸ್ಎಲ್ ಸಿಯಲ್ಲಿ 625 ಕ್ಕೆ 206 ಅಂಕ ಗಳಿಸಿದರೂ ವಿದ್ಯಾರ್ಥಿಗಳು ಪಾಸ್ ಆಗಲಿದ್ದಾರೆ. ಹೊಸ ನಿಯಮದ ಪ್ರಕಾರ ಆಂತರಿಕ ಮತ್ತು ಲಿಖಿತ ಪರೀಕ್ಷೆ ಸೇರಿ ಒಂದು ವಿಷಯಕ್ಕೆ 30 ಅಂಕ ಕಡ್ಡಾಯವಾಗಿರಲಿದೆ.
ಎಸ್ಎಸ್ಎಲ್ ಸಿ ಪರೀಕ್ಷೆಯಲ್ಲಿ ಪ್ರತೀ ವಿಷಯದಲ್ಲೂ 30 ಅಂಕ ಪಡೆದರೂ ವಿದ್ಯಾರ್ಥಿಗಳು ಪಾಸ್ ಆಗಲಿದ್ದಾರೆ. ಈ ಹೊಸ ನಿಯಮ ಈ ಸಾಲಿನಿಂದ ಅಂದರೆ 2025-26 ರಿಂದಲೇ ಜಾರಿಗೆ ಬರಲಿದೆ ಎಂದು ಸಚಿವರು ತಿಳಿಸಿದ್ದಾರೆ.
ಸಾರ್ವಜನಿಕರ ಅಭಿಪ್ರಾಯ ಸಂಗ್ರಹಿಸಿ ಈ ನಿರ್ಧಾರಕ್ಕೆ ಬರಲಾಗಿದೆ. ಪ್ರಥಮ ಭಾಷೆ ಹೊರತುಪಡಿಸಿ ಉಳಿದ ವಿಷಯಗಳಲ್ಲಿ ಶೇ.33 ಅಂಕ ಬಂದರೂ ವಿದ್ಯಾರ್ಥಿ ಪಾಸ್ ಆಗುತ್ತಾರೆ. ಪ್ರಥಮ ಭಾಷೆ ಗರಿಷ್ಠ ಅಂಕವನ್ನು 120 ರಿಂದ 100 ಕ್ಕೆ ಇಳಿಸುವ ಬಗ್ಗೆ ಇನ್ನೂ ತೀರ್ಮಾನವಾಗಿಲ್ಲ ಎಂದು ಸಚಿವರು ಹೇಳಿದ್ದಾರೆ.