ಈ ಮೂಲಕ ವಿದ್ಯಾರ್ಥಿಗಳಿಗೆ ಮತ್ತೊಂದು ಗುಡ್ ನ್ಯೂಸ್ ನೀಡಲು ಹೊರಟಿದೆ.
ರಾಜ್ಯದಲ್ಲಿ ಕೊರೋನಾ ಸೋಂಕಿನ ಮುಂಜಾಗ್ರತಾ ಕ್ರಮದಿಂದಾಗಿ ಶಾಲಾ-ಕಾಲೇಜು ಬಂದ್ ಮಾಡಲಾಗಿತ್ತು. ಕೊರೋನಾ ಇಳಿಕೆಯಿಂದಾಗಿ ಮತ್ತೆ ಶಾಲಾ-ಕಾಲೇಜುಗಳನ್ನು ಆರಂಭವಾಗದ ಕಾರಣ ಬಿಸಿಯೂಟದ ಆಹಾರಗಳನ್ನು ವಿದ್ಯಾರ್ಥಿಗಳಿಗೆ ಹಂಚಿಕೆ ಮಾಡುತ್ತಿತ್ತು. ಇದೀಗ ಶಾಲಾ-ಕಾಲೇಜು ಆರಂಭದ ನಂತ್ರ ವಿದ್ಯಾರ್ಥಿಗಳಿಗಾಗಿ ಮತ್ತೆ ಬಿಸಿಯೂಟ ಯೋಜನೆಯನ್ನು ಪುನರಾರಂಭಿಸೋದಕ್ಕೆ ಚಿಂತನೆ ನಡೆಸಿದೆ.
ಈ ಕುರಿತಂತೆ ಮಾತನಾಡಿದಂತ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಅವರು, ನಾನು ಶಾಲೆಗಳಿಗೆ ಭೇಟಿ ನೀಡಿ ಮಕ್ಕಳೊಂದಿಗೆ ಸಮಾಲೋಚನೆ ನಡೆಸುತ್ತಿದ್ದೇನೆ. ಈ ವೇಳೆ ಮಕ್ಕಳು ತಾವು ಮನೆಯಿಂದ ಊಟ ತರ್ತಾ ಇರೋದಾಗಿ ತಿಳಿಸಿದ್ದಾರೆ. ಈ ಮಕ್ಕಳಿಗೆ ಅನುಕೂಲ ಆಗೋ ನಿಟ್ಟಿನಲ್ಲಿ ಮಧ್ಯಾಹ್ನದ ಬಿಸಿಯೂಟದ ಯೋಜನೆ ಆರಂಭಿಸೋ ಚಿಂತನೆ ನಡೆಸಲಾಗಿದೆ ಎಂದರು.
ಅಂದಹಾಗೇ ಅಕ್ಟೋಬರ್ 1ರಿಂದ ಇದುವರೆಗೆ ಶೇ.50ರಷ್ಟು ವಿದ್ಯಾರ್ಥಿಗಳ ಹಾಜರಾತಿ ನಿಯಮ ಬದಲಾಗಲಿದೆ. ಶೇ.100ರಷ್ಟು ವಿದ್ಯಾರ್ಥಿಗಳ ಹಾಜರಿಗೆ ಸರ್ಕಾರ ಅನುಮತಿಸಿದೆ. ಇದೇ ಸಂದರ್ಭ ಶಾಲಾ ವಿದ್ಯಾರ್ಥಿಗಳಿಗೆ ಅನುಕೂಲವಾಗೋ ನಿಟ್ಟಿನಲ್ಲಿ ಮಧ್ಯಾಹ್ನದ ಬಿಸಿಯೂಟ ಯೋಜನೆ ಶೀಘ್ರವೇ ಪುನರಾರಂಭಿಸಲಿದೆ.